ಬಾಗಲಕೋಟೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್ ಮನೆ ಮೇಲೆ ದಾಳಿ ; 32 ಲಕ್ಷ ನಗದು ಪತ್ತೆ
2508 views
bagalkot ವಿಡಿಯೋಗಳಿಗೆ ಚಂದಾದಾರರಾಗಿಬಾಗಲಕೋಟೆ :ಲೋಕಾಯುಕ್ತ ದಾಳಿ ಸಮಯದಲ್ಲಿ ಲಕ್ಷಾಂತರ ರೂಪಾಯಿಗಳ ಹಣ ಜೊತೆಗೆ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆಗಿರುವ ಚೇತನಾ ಪಾಟೀಲ ಅವರ ಮನೆಯ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದರು, ಈ ಸಮಯದಲ್ಲಿ ದಾಖಲೆ ಹಾಗೂ ನಗದು ಹಣ ಪರಿಶೀಲನೆ ಮಾಡುವ ಸಮಯದಲ್ಲಿ 32 ಲಕ್ಷ ನಗದು ಹಣ ಹಾಗೂ ಎರಡು ಆಮೆ ದೂರಕಿದೆ. ಮನೆಯಲ್ಲಿ ಹಲವು ದಿನಗಳಿಂದ ಆಮೆ ಸಾಕಿದ್ದರು ಎನ್ನಲಾಗಿದೆ. ಅರಣ್ಯ ಕಾಯ್ದೆ ಅಡಿ ಪ್ರಾಣಿಗಳು ಸಾಕುವುದು ನಿಷೇಧ ಇದ್ದರೂ ಸಹ, ಸರ್ಕಾರಿ ಅಧಿಕಾರಿಯಾಗಿ ಕಾನೂನು ಉಲ್ಲಂಘನೆ ಮಾಡಿದ್ದಾರೆ.
ಮತ್ತೋರ್ವ ಬೀಳಗಿ ಪಟ್ಟಣದ ಸಹಾಯಕ ನಿರ್ದೇಶಕ ಅಧಿಕಾರಿ ಕೃಷ್ಣ ಶಿರೂರ ಅವರ ವಿದ್ಯಾಗಿರಿಯಲ್ಲಿರುವ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಒಟ್ಟು ಎರಡು ತಂಡಗಳಾಗಿ ದಾಳಿ ಮಾಡಿ, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿಗಳಾದ ಶಂಕರರಾಗಿ, ಪುಷ್ಪಲತಾ ನೇತೃತ್ವದ ತಂಡಗಳಿಂದ ದಾಳಿ ನಡೆಸಲಾಗಿದೆ. ಅಧಿಕಾರಿಗಳ ಮನೆಗಳ ಜೊತೆಗೆ ಕಚೇರಿಗಳ ಮೇಲೂ ದಾಳಿ ಮಾಡಿ, ಸಿಬ್ಬಂದಿ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.