ಬೆಳಗಾವಿಯಲ್ಲೂ ಭುಗಿಲೆದ್ದ ಕಾವೇರಿ ಕಿಚ್ಚು, ಕರವೇ ಕಾರ್ಯಕರ್ತರಿಂದ ಪ್ರತಿಭಟನೆ..!
1137 views
belagavi ವಿಡಿಯೋಗಳಿಗೆ ಚಂದಾದಾರರಾಗಿಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ, ಇಂದು ಕರ್ನಾಟಕವನ್ನು ಬಂದ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಬಸ್ ಸಂಚಾರ ಬಂದ್ ಮಾಡಿಸಿ ಪ್ರತಿಭಟನೆ, ಬೆಳಗಾವಿಯಲ್ಲಿ ಪ್ರತಿಭಟನೆಗೆ ರೈತ ಸಂಘಟನೆಗಳೂ ಕೂಡಾ ಸಾಥ್ ನೀಡಿವೆ.
ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.
ನಗರದ ಚನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ರಸ್ತೆ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗಿ ಕಿಡಿಕಾರಿದ್ದಾರೆ.