ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ, ಜೆಡಿಎಸ್ ಬಾವುಟ ಹಿಡಿದ ಮುನಿರತ್ನ
1409 views
bengaluru ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಡಿಎಂಕೆ ಏಜೆಂಟ್ ಆಗಿ ಕೆಲಸ ಮಾಡ್ತಿದ್ದಾರೆ ಎಂದು ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಎಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಜಂಟಿ ಪ್ರತಿಭಟನೆಯಲ್ಲಿ ಮಾತನಾಡಿದ ಇಬ್ಬರು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕಾವೇರಿ ಕಿಚ್ಚು ತೀವ್ರಗೊಂಡಿದೆ. ತಮಿಳುನಾಡಿಗೆ ಕಾವೇರಿ ನೀರನ್ನು ಹರಿಯಬಿಡುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎಚ್ಡಿ ಕುಮಾರಸ್ವಾಮಿ, ಅಶ್ವತ್ಥ ನಾರಾಯಣ, ಸಂಸದ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುನಿರತ್ನ, ಟಿ ಸರವಣ, ಡಾ ಅನ್ನದಾನಿ ಸೇರಿದಂತೆ ಹಲವು ನಾಯಕರು ಭಾಗಿಯಾದರು.
ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಹೋರಾಟದಲ್ಲಿ ಮಾಜಿ ಸಚಿವ ಮುನಿರತ್ನ ಜೆಡಿಎಸ್ ಬಾವುಟ ಹಿಡಿದುಕೊಳ್ಳುವ ಮೂಲಕ ಗಮನ ಸೆಳೆದರು. ಮೈತ್ರಿಯ ಬಳಿಕ ಎರಡು ಪಕ್ಷಗಳ ಜಂಟಿ ಹೋರಾಟ ನಡೆಯುತ್ತಿದೆ. ಕಾವೇರಿ ವಿಚಾರವಾಗಿ ಇದೀಗ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟಕ್ಕೆ ಧುಮುಕಿದೆ.
ಕಾವೇರಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಎಡವಿದೆ ಎಂದು ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಆರೋಪಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ತಮಿಳುನಾಡು ಮೂರನೇ ಬೆಳೆ ಬೆಳೆಯಲು ನೀರು ಉಪಯೋಗ ಮಾಡಿದಾಗ ಎಚ್ಚರಿಕೆ ವಹಿಸಬೇಕಿತ್ತು. ಇದಕ್ಕೆ ಆ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಬೇಕಿತ್ತು ಎಂದರು.