ಯಾವುದೇ ನಿರ್ಬಂಧ ಇಲ್ಲದೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ..!
1094 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಕಾಂಗ್ರೆಸ್ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಎಲ್ಲ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ಈ ಯೋಜನೆಗೆ ಯಾವುದೇ ನಿರ್ಬಂಧವನ್ನು ರಾಜ್ಯ ಸರ್ಕಾರ ವಿಧಿಸಿಲ್ಲ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣದ ಯೋಜನೆ 'ಶಕ್ತಿ'ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಜೂನ್ 11 ರಿಂದ ಹವಾ ನಿಯಂತ್ರಿತ ಬಸ್ಗಳು ಮತ್ತು ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ಕೆಎಸ್ಆರ್ಟಿಸಿ ಬಸ್ಗಳಲ್ಲೂ ಪ್ರಯಾಣ ಮಾಡಬಹುದು ಎಂದು ಘೋಷಿಸಿದ್ದಾರೆ. ಪುರುಷರಿಗೆ ಶೇ.50ರಷ್ಟು ಮೀಸಲಾತಿ ಘೋಷಿಸಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಅದಲ್ಲದೇ ಕರ್ನಾಟಕದಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಪ್ರಯಾಣಿಸಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.