ಗೃಹಜ್ಯೋತಿ ಗೊಂದಲ ನಿವಾರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ; ಅಧಿಕಾರಿಗಳ ಜತೆ ಮೀಟಿಂಗ್
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಜ್ಯೋತಿ ಯೋಜನೆ ಅನುಷ್ಠಾನ ಕುರಿತಂತೆ ಸಭೆ ನಡೆಸಿ ಚರ್ಚಿಸಿದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.