ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಮೂಲ ಮಂತ್ರದ ಬಜೆಟ್: ಸಿದ್ದರಾಮಯ್ಯ
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎಂದು ಹೇಳಲು ನನಗೆ ಹೆಮ್ಮೆಯಿದೆ. ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್ರವರೆಗೆ ಈ ನಮ್ಮ ನಾಡಿನಲ್ಲಿ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ತೇರನ್ನು ಜೊತೆಜೊತೆಗೇ ಎಳೆಯಲಾಗಿದೆ. ಈ ಘನ ಪರಂಪರೆಯನ್ನು ನಾನು ಎಂದಿನಂತೆ ಈ ಬಾರಿಯೂ ಮುಂದುವರೆಸಲು ಶ್ರಮಿಸಿದ್ದೇನೆ.
ಇದು ನಾನು ಮಂಡಿಸುತ್ತಿರುವ ಹದಿನಾಲ್ಕನೆಯ ಆಯವ್ಯಯ ಪತ್ರ. ಮುಖ್ಯಮಂತ್ರಿಯಾಗಿ, ವಿತ್ತೀಯ ಹೊಣೆಯನ್ನು ಹೊತ್ತು ಮಂಡಿಸುತ್ತಿರುವ ಏಳನೆಯ ಬಜೆಟ್. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆರು ಆಯವ್ಯಯ ಪತ್ರಗಳನ್ನು ಮಂಡಿಸಿದ್ದೆ. ನನ್ನ ಇಷ್ಟೂ ಆಯವ್ಯಯ ಪತ್ರಗಳ ಹಿಂದೆ ಯಾವ ಕಲ್ಯಾಣ ರಾಜ್ಯದ ಕನಸನ್ನು ಸಾಕಾರಗೊಳಿಸಲು ಈ ನಾಡಿನ ಶ್ರೇಷ್ಠ ಮನಸ್ಸುಗಳು ಬಯಸಿದ್ದವೋ ಅದನ್ನು ಈಡೇರಿಸಲೇಬೇಕೆನ್ನುವ ಉದ್ದೇಶ, ಬದ್ಧತೆಗಳು ಸ್ಪಷ್ಟವಾಗಿವೆ. ನಮ್ಮ ಪಕ್ಷದ ಧ್ಯೇಯೋದ್ದೇಶವೂ ಸಹ ಇದುವೇ ಆಗಿದೆ. ನನ್ನ ಹಿಂದಿನ ಎಲ್ಲ ಆಯವ್ಯಯಗಳಲ್ಲಿ ʻಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳುʼ ಎಂಬ ಮೂಲಮಂತ್ರದ, ಕರ್ನಾಟಕ ಮಾದರಿಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನವಿದೆ ಎಂದು ಹೇಳಿದರು
ಈ ಬಾರಿ ಕರ್ನಾಟಕದ ಜನತೆ ತಮ್ಮ ಮನದಿಂಗಿತವನ್ನು ಗಟ್ಟಿಯಾಗಿ, ಸಂತೋಷದಿಂದ, ಪ್ರಾಮಾಣಿಕವಾಗಿ ಹೇಳಿದ್ದಾರೆ. ಈ ನಾಡಿನ ಜನತೆ ಗಟ್ಟಿ ದನಿಯಲ್ಲಿ ಮಹತ್ವಪೂರ್ಣ ಸಂದೇಶವನ್ನು ಇಡೀ ದೇಶಕ್ಕೆ ಸ್ಪಷ್ಟವಾಗಿ ನೀಡಿದ್ದಾರೆ. ದುಡಿಮೆಯ ಗೌರವ ಎತ್ತಿ ಹಿಡಿಯುವ ತುಡಿತ, ಎಲ್ಲರ ಒಳಿತಿಗೆ ದುಡಿಯುವ ಕನಸು, ಮುಕ್ತ ವಾತಾವರಣದಲ್ಲಿ ಬದುಕುವ ಭರವಸೆ, ಸಾಮಾಜಿಕ ನ್ಯಾಯ ಹಾಗೂ ಸಮತೆ, ಸಮಾನತೆಯ ಮೇಲಿನ ಹಕ್ಕಿನ ಪ್ರತಿಪಾದನೆಯು ಕನ್ನಡಿಗರ ಅಪೇಕ್ಷೆಗಳ ಅಭಿವ್ಯಕ್ತಿಯಾಗಿದೆ. ಕುಟುಂಬ ಪೋಷಣೆ, ಸಾಮಾಜಿಕ ಸಾಮರಸ್ಯ ಹಾಗೂ ಆರ್ಥಿಕ ಸಮೃದ್ಧಿಯ ಆಶಯದೊಂದಿಗೆ ಸಮಾಜ ನಿರ್ಮಾಣ ಸಾಮಾನ್ಯ ಕನ್ನಡಿಗರ ಬದುಕಿನ ಹಾದಿಯಾಗಿದೆ ಎಂದರು