ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಕೆ
1066 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ನೇಮಕಾತಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯುಟಿ ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಅವರ ಕೊಠಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬುಧವಾರ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವಿರೋಧವಾಗಿ ಯುಟಿ ಖಾದರ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ಬುಧವಾರವೇ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಯು.ಟಿ ಖಾದರ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆರೋಗ್ಯ ಸಚಿವರಾಗಿ, ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಕಳೆದ ವಿಧಾನಸಭೆ ಅವಧಿಯಲ್ಲಿ ಅವರು ಪ್ರತಿಪಕ್ಷದ ಉಪ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.