ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆಗೆ ಉನ್ನತ ಅಧಿಕಾರಿಗಳ ಬಳಕೆಗೆ ಎಚ್ಡಿ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿ
ಬೆಂಗಳೂರು: ''ಹಿಂದೆಯೂ ರಾಜಕೀಯ ಪಕ್ಷಗಳು ಸಭೆಗಳು ನಡೆದಿವೆ, ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದಲ್ಲಿ ನಮ್ಮನ್ನೆಲ್ಲ ಆಹ್ವಾನಿಸಿದ್ದರು. ಆದರೆ, ಇಲ್ಲಿ ಮುಖ್ಯಮಂತ್ರಿಗಳೇ ನೇರವಾಗಿ ಆದೇಶ ಮಾಡಿದ್ದು, ಐಎಎಸ್ ಅಧಿಕಾರಗಳನ್ನು ದ್ವಾರಪಾಲಕರಂತೆ ಕೆಲಸ ಮಾಡುವಂತೆ ಸೂಚಿಸಿದ್ದಾರೆ. ಪಕ್ಷದ ಕಾರ್ಯಕರ್ತರಂತೆ ಸರಕಾರದ ಅಧಿಕಾರಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಪಕ್ಷಗಳ ಕಾರ್ಯಕ್ರಮಕ್ಕೆ ಉನ್ನತ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ'' ಎಂದು ಎಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ಉನ್ನತ ಅಧಿಕಾರಿಗಳನ್ನು ಬಳಸಿಕೊಂಡಿರುವ ಬಗ್ಗೆ ಎಚ್ಡಿ ಕುಮಾರಸ್ವಾಮಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ಸಭೆ ನಡೆಯುತ್ತಿದೆ. ಈ ಸಭೆಗೆ ಬರುವ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪ. ನುಡಿದಂತೆ ನಡೆಯುವುದು ಎಂದರೆ ಇದೇನಾ? ಅದಲ್ಲದೇ, ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರ್ಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಕಿಡಿಕಾರಿದ್ದಾರೆ.