ರಾಜ್ಯದಲ್ಲಿ ಐದು ದಿನ ಮಳೆಯ ಮುನ್ಸೂಚನೆ, ಕರಾವಳಿ ಭಾಗಕ್ಕೆ ಎಚ್ಚರಿಕೆ
1066 views
ಬೆಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಹ ವರುಣ ಅಬ್ಬರಿಸಲಿದ್ದಾನೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಗಂಟೆಗೆ 40- 50 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳುರು ನಗರ ಜಿಲ್ಲೆಯ, ಬೆಂಗಳೂರು ದಕ್ಷಿಣ ತಾಲೂಕು, ನೆಲಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರಿಗೆ ಎಚ್ಚರಿಕೆ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಲರ್ಟ್ ನೀಡಿದ್ದು, ಈ ಭಾಗದಲ್ಲಿ ಭಾರೀ ಗುಡುಗು ಮಿಂಚಿನ ಸಹಿತ ಮಳೆ ಹಾಗೂ ಹೆಚ್ಚಿನ ಗಾಳಿಯ ವ್ಯಾಪ್ತಿಯಲ್ಲಿದ್ದೀರಿ ಎಂದು ಸಂದೇಶ ಕಳಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.