ಸೇತುವೆ ಮುಳುಗಡೆ, ಹೊರನಾಡು ಸಂಪರ್ಕ ಕಡಿತಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಕಳಸ -ಹೊರನಾಡು ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಕುದುರೆಮುಖ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಭದ್ರಾ ನದಿ ಹರಿವಿನಲ್ಲಿ ಹೆಚ್ಚಳವಾಗಿದೆ. ನಿರಂತರ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರ ಸಂಚಾರಕ್ಕೆ ಅಡಚಣೆ ಉಂಟಾಗಿದೆ.