ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ
ಚಿತ್ರದುರ್ಗ : ನಾಡಿನಾದ್ಯಂತ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಕೋಟೆ ನಾಡು ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಪಂಚಾಕ್ಷರ ಸಭಾಭವನದ ಪಕ್ಕದಲ್ಲಿ ಸುಮಾರು 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಒಂದು ವಾರದ ಹಿಂದೆಯೇ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದ್ದು, ಮೈಸೂರು ಅರಮನೆಯಂತೆ ಹೋಲುವ ವೇದಿಕೆ ನಿರ್ಮಿಸಲಾಗಿದೆ. ಈ ವೇದಿಕೆಯ ದರ್ಬಾರ್ ನಲ್ಲಿ ಶ್ರೀಗಣಪ ರಾರಾಜಿಸುತ್ತಿದ್ದಾನೆ.
ವಿಶ್ವಹಿಂದೂ ಪರಿಷತ್, ಬಜರಂಗದಳ ವತಿಯಿಂದ ಈ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ವಿಶೇಷ ಪೂಜೆಯಲ್ಲಿ ನಗರದ ಅನೇಕ ಭಕ್ತರು ಸರತಿಯಲ್ಲಿ ಬಂದು ಗಣಪನ ದರ್ಶನ ಪಡೆದು ತನ್ನ ಇಷ್ಟಾರ್ಥಗಳನ್ನು ಬೇಡಿಕೊಂಡರು. 21 ದಿನಗಳ ಕಾಲ ಪೂಜೆ ನಡೆಯಲಿದ್ದು ಈ ಪೂಜೆಯಲ್ಲಿ ವಿಶೇಷ ಗೋಷ್ಠಿಗಳು, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.
21 ದಿನದ ಬಳಿಕ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಯಾತ್ರೆಗೆ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದೆ. ಶೋಭಾಯಾತ್ರೆ ನಡೆಯುವ ದಿನ ಇಡೀ ಚಿತ್ರದುರ್ಗ ನಗರದ ಪ್ರಮುಖ ಬೀದಿಗಳು ಕೇಸರಿಮಯವಾಗಿರುತ್ತದೆ. ರಾಜ್ಯದ ಮೂಲೆ ಮೂಲೆಗಳಿಂದ ಯುವಕರು ಈ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

Curated by Shivamoorthi M|TimesXP Kannada|19 Sept 2023