ಆರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಸುಧಾಕರ್ ಚಾಲನೆ ; ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಸುಧಾಕರ್
1041 views
chitradurga ವಿಡಿಯೋಗಳಿಗೆ ಚಂದಾದಾರರಾಗಿಚಿತ್ರದುರ್ಗ :ಸಂಚಾರಿ ಆರೋಗ್ಯ ಘಟಕದ ಆಂಬ್ಯುಲೆನ್ಸ್ ವಾಹನವನ್ನ ಸಚಿವ ಡಿ.ಸುಧಾಕರ್ ಚಲಾಯಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಕೀಲು ಮೂಳೆ, ಮಂಡಿಚಿಪ್ಪು, ಮರುಜೋಡಣಾ ಮತ್ತು ಹದ್ರೋಗ ತಪಾಸಣಾ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಆಂಬ್ಯುಲೆನ್ಸ್ ವಾಹನವನ್ನು ತಾವೇ ಡ್ರೈವಿಂಗ್ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವರು ಮನುಷ್ಯನಿಗೆ ಜೀವನ ಎಷ್ಟು ಮುಖ್ಯವೋ, ಆರೋಗ್ಯವೂ ಅಷ್ಟೇ ಮುಖ್ಯವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರು ಜೀವನದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ನಾನು ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ನಾವು ಸೇವಿಸುವ ಆಹಾರ ಶೈಲಿ ಬದಲಾವಣೆಯಾಗಿದೆ. ಹಿಂದಿನ ಆಹಾರ ಪದ್ಧತಿಗೂ, ಇವತ್ತಿನ ಆಹಾರದ ಪದ್ಧತಿಗೂ ತುಂಬಾ ಬದಲಾವಣೆ ಆಗಿದೆ ಎಂದರು. ಆರೋಗ್ಯ ಶಿಬಿರ ಕಾರ್ಯಕ್ರಮ ಉಚಿತವಾಗಿ ನಡೆಯುತ್ತಿದ್ದು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಈ ಹಿಂದೆ 2008 ಮತ್ತು 2013ರಲ್ಲಿ ಎರಡು ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಲಾಗಿದೆ ಅದರಲ್ಲೂ ಶಿಕ್ಷಣ, ಆರೋಗ್ಯ, ನೀರಾವರಿ, ರಸ್ತೆ, ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೆ. ಈ ಬಾರಿ ನಿಮ್ಮೆಲ್ಲರ ಸಹಕಾರದಿಂದ ಕ್ಷೇತ್ರದಲ್ಲಿ ಮತ್ತೆ ಶಾಸಕರಾಗಿ ಸಚಿವರಾಗುವ ಅವಕಾಶ ಒದಗಿ ಬಂದಿದೆ. ನಿಮ್ಮೆಲ್ಲರ ಋಣ ತೀರಿಸುತ್ತೇನೆ ಎಂದು ಸಚಿವರು ತಿಳಿಸಿದರು.