ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುತ್ತೇವೆ; ಸಿದ್ದರಾಮಯ್ಯ
1038 views
ದಾವಣಗೆರೆ ವಿಡಿಯೋಗಳಿಗೆ ಚಂದಾದಾರರಾಗಿದಾವಣಗೆರೆ: ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗಾತ್ರ ಮತ್ತು ಅಧಿವೇಶನ ಅವದಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಬಜೆಟ್ ಮಂಡನೆಯ ಬಳಿಕ ಒಂದು ವಾರಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಹಿಂದಿನ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರ 3 ಲಕ್ಷದ 9 ಸಾವಿರದ 782 ಕೋಟಿ ರೂಪಾಯಿ ಎಂದರು.
ಗೋ ಹತ್ಯೆ ನಿಷೇಧ ವಾಪಸ್ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.12 ವರ್ಷ ದಾಟಿದ ಮತ್ತು ಬರಡು ರಾಸುಗಳು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಕುರಿತು 1964ರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬೀಜ ಬಿತ್ತನೆ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಎಲ್ಲ ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಲಾಗಿದೆ ಎಂದರು.