ಹುಬ್ಬಳ್ಳಿಯ ಆದರ್ಶನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದಿನ ನಾಮಫಲಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಬುದು ಹಾಗೆಯೇ ಉಳಿದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ಬಸವರಾಜ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯಲ್ಲೂ ಜನರು ಮನವಿಗಳನ್ನು ಸಲ್ಲಿಸುವುದು ಮುಂದುವರಿದಿದೆ. ">
Curated byHemanth kumar S|Vijaya Karnataka Web|26 May 2023
ಹುಬ್ಬಳ್ಳಿ: ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರವು ಸಚಿವ ಸಂಪುಟ ವಿಸ್ತರಣೆಗಾಗಿ ದಿಲ್ಲಿಯಲ್ಲಿ ಕಸರತ್ತು ನಡೆಸುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಈಗಲೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ. ಅದಕ್ಕೆ ಸಾಕ್ಷಿ ಈ ನಾಮಫಲಕ.ಹುಬ್ಬಳ್ಳಿಯ ಆದರ್ಶನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದಿನ ನಾಮಫಲಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಬುದು ಹಾಗೆಯೇ ಉಳಿದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಾದ ಬಸವರಾಜ ಬೊಮ್ಮಾಯಿ ಅವರಿಗೆ ಹುಬ್ಬಳ್ಳಿಯಲ್ಲೂ ಜನರು ಮನವಿಗಳನ್ನು ಸಲ್ಲಿಸುವುದು ಮುಂದುವರಿದಿದೆ.