ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಂಡಿದ್ದಾರೆ, ಬಿಜೆಪಿ-ಜೆಡಿಎಸ್ ಮೈತ್ರಿಗೆ ಶೆಟ್ಟರ್ ಲೇವಡಿ
1203 views
dharwad ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದು, ಇಬ್ಬರು ಅಸಹಾಯಕರು ಸೇರಿಕೊಂಡು ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡ್ಕೊತೇವೆ ಅಂದ್ರು, ನಂತರ ಅದಕ್ಕೆ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ. ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯೋದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳ್ಕೋತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತೆ ಎಂದು ಹರಿಹಾಯ್ದರು.
ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅದರ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ಮೈತ್ರಿ ವಿಚಾರದಲ್ಲಿ ಬಿಜೆಪಿ ಯಾವಾಗಲೂ ದ್ವಂದ್ವ ನಿಲುವು ಅನುಸರಿಸುತ್ತೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಆರೋಪ ಮಾಡಿದರು. ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು. ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ ಎಂದು ಕಿಡಿಕಾರಿದರು.