ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಇಡಲು ಪಾಲಿಕೆ ಅನುಮತಿ ; ಷರತ್ತು ಅನ್ವಯ!
1342 views
dharwad ವಿಡಿಯೋಗಳಿಗೆ ಚಂದಾದಾರರಾಗಿಹುಬ್ಬಳ್ಳಿ:ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಈಶ್ಬರ ಉಳ್ಳಾಗಡ್ಡಿ ಹೇಳಿದರು.
ನಗರದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತಡರಾತ್ರಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಕಳೆದ ತಿಂಗಳು ಆಗಸ್ಟ್ 31 ರಂದು ನಡೆದ ಸಾಮಾನ್ಯ ಸಭೆ ಠರಾವಿನ ಆದೇಶ ಪ್ರಕಾರ ಈಗ ಮೂರು ದಿನಗಳವರೆಗೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಟ್ಟಿದ್ದೇವೆ, ಕಾನೂನು ಸುವ್ಯವಸ್ಥೆಗಾಗಿ ನಾವು 18 ಷರತ್ತುಗಳನ್ನು ಹಾಕಿದ್ದೇವೆ, ಗಜಾನನೋತ್ಸವ ಸಲುವಾಗಿ ಪೆಂಡಾಲ್ ಅಳತೆ ಸೇರಿದಂತೆ ಹಲವು ಷರತ್ತುಗಳನ್ನು ಹಾಕಲಾಗಿದ್ದು ಅನ್ಯ ಧರ್ಮದವರಿಗೆ ಧಕ್ಕೆ ಉಂಟು ಮಾಡದಂತೆ ಷರತ್ತುಗಳನ್ನು ಹಾಕಿದ್ದೇವೆ ಎಂದು ಹೇಳಿದರು.
ನಾವು ಒಂದು ವರ್ಷಕ್ಕೆ ಮಾತ್ರ ಅನುಮತಿ ಕೊಟ್ಟಿದ್ದೇವೆ, ಇದು ಮುಂದಿನ ದಿನಗಳಲ್ಲಿ ಅನ್ವಯ ಆಗಲ್ಲ ಎಂದ ಅವರು, ನಮ್ಮ ಮೇಲೆ ಅನುಮತಿ ಕೊಡಬಾರದು ಅಂತ ಯಾರ ಒತ್ತಡವೂ ಇರಲಿಲ್ಲ, ನಾನು ಸ್ಪಷ್ಟ ಪಡಿಸುತ್ತಿದ್ದೇನೆ, ನಾವು ಅನುಮತಿ ನೀಡಬೇಕು ಅನ್ನೋಷ್ಟರಲ್ಲಿ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ದಾಖಲಾಗಿದ್ದರಿಂದ ಉಚ್ಚ ನ್ಯಾಯಾಲಯದ ನಿರ್ಧಾರಕ್ಕೆ ಕಾಯಬೇಕಿತ್ತು, ಪ್ರಮಾಣೀಕೃತ ಪತ್ರ ಸಹ ತಡವಾಗಿ ಸಿಕ್ಕಿತು ಎಂದು ಹೇಳಿದರು.