ಕೋವಿಡ್ ವೇಳೆ ಭ್ರಷ್ಟಾಚಾರ, ತನಿಖಾ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಬಿಜೆಪಿ ವಿರೋಧಿ: ಪ್ರಲ್ಹಾದ್ ಜೋಶಿ
dharwad ವಿಡಿಯೋಗಳಿಗೆ ಚಂದಾದಾರರಾಗಿ
ಹುಬ್ಬಳ್ಳಿ: ಕಳೆದ ಸರ್ಕಾರದ ಅವಧಿಯಲ್ಲಿ ಕೊರೊನಾ ಸೋಂಕು ಅಬ್ಬರದ ವೇಳೆ, ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ “ಆಯೋಗದ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿಗಳಿದ್ದಾರೆ. ಅವರು ದಿನ ಬೆಳಗಾದರೇ ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಬೈಯ್ಯುವುದೇ ಅವರ ಕೆಲಸ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ನವರು ಬೇಕಂತಲೇ ಭಾರತೀಯ ಜನತಾ ಪಕ್ಷದ ವಿರೋಧಿಯಾಗಿರುವ ನಿವೃತ್ತ ನ್ಯಾಯಮೂರ್ತಿಗಳನ್ನು ಇಟ್ಟು ಬಿಜೆಪಿಗೆ ಬೈಯಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಂದ ದಿನ ನಮ್ಮನ್ನು ಬೈಯಿಸುವ ಕೆಲಸ ಮಾಡುತ್ತಿದ್ದಾರೆ. ಜನ ಇದನ್ನು ನೋಡುತ್ತಿದ್ದಾರೆ ಎಂದರು.
ಇಡೀ ದೇಶದಲ್ಲಿ ನೆಹರು ಕಾಲದಿಂದ ಹಿಡಿದು ಭ್ರಷ್ಟಾಚಾರ ಮಾಡಿದಂತವರು ಕಾಂಗ್ರೆಸ್ನವರು. ಇದನ್ನು ನಾವು ಹೇಳುತ್ತಿಲ್ಲ ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ವರ್ಗಾವಣೆಯಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ ಅಂತ ಅವರು ಹೇಳಿದ್ದಾರೆ. ಬಸವರಾಜ್ ರಾಯರೆಡ್ಡಿ ಅವರು ಭ್ರಷ್ಟಾಚಾರ ಬಹಳ ಆಗಿದೆ ಅಂತ ಹೇಳಿದ್ದಾರೆ. ಇದನ್ನೆಲ್ಲ ಮೊದಲು ನೋಡಿಕೊಳ್ಳಿ ಎಂದು ಹರಿಹಾಯ್ದರು.