ಮಂಡ್ಯದಲ್ಲಿ ಕೇಸರಿ ಶಾಲು ಹಾಕಿ ಪಾಕ್ ಪರ ಘೋಷಣೆ ಕೂಗಿದ್ರು; ಯಾಕೆ ಅರೆಸ್ಟ್ ಮಾಡಲಿಲ್ಲ?; ಡಿಕೆಶಿ
ಧಾರವಾಡ ವಿಡಿಯೋಗಳಿಗೆ ಚಂದಾದಾರರಾಗಿ
ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಡಿಕೆಶಿ ವಿರುದ್ಧದ ಇಡಿ ಕೇಸ್ ರದ್ದು ಮಾಡಿದ ವಿಚಾರಕ್ಕೆ ಮಾಧ್ಯಮದವರ ಮೇಲೆ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಇಡಿ ದಾಳಿಯಾದಾಗ ಒಂದು ರೀತಿ, ಬಂಧನ ಆದಾಗ ಒಂದು ರೀತಿ ತೋರಿಸ್ತೀರಿ ಈಗ ಸುಮ್ಮನೇ ಇದೀರಾ ಎಂದು ಬೇಸರ ಹೊರಹಾಕಿದ್ರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಾಕ್ ಪರ ಘೋಷಣೆ ವಿಚಾರದಲ್ಲಿ ಸಿಎಂ ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ ಮಾಡುವ ವಿಚಾರಕ್ಕೆ ಮಾತನಾಡಿ, ಯಾವಾಗ ಬೇಕಂತೆ ರಾಜೀನಾಮೆ ಕೊಡೋಣ ಬಿಡಿ, ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ್ರು. ಅವರನ್ನ ಯಾಕೆ ಬಂಧನ ಮಾಡಲಿಲ್ಲ?, ನಾವು ಘೋಷಣೆ ಕೂಗಿದವರ ವಿಚಾರಣೆ ಮಾಡುತ್ತಿದ್ದೇವೆ. ಬಿಜೆಪಿಯವರು ಕೇಸರಿ ಶಾಲು ಹಾಕಿ ಘೋಷಣೆ ಕೂಗಿದ್ದಾರೆ. ಬಿಜೆಪಿಯವರಿಗೆ ಬದ್ಧತೆ ಇದೆಯಾ? ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ವಿಚಾರಕ್ಕೆ ಮಾತನಾಡಿ, ಗುರುವಾರ ಚುನಾವಣಾ ಕಮಿಟಿ ಸಭೆ ಇದೆ, ಸಭೆಯ ನಂತರ ಕಾಂಗ್ರೆಸ್ ಟಿಕೆಟ್ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಮಾತನಾಡಿ, ಕೇವಲ ಇಬ್ಬರು ಮೂವರಲ್ಲ ಬಿಜೆಪಿಯಿಂದ ಅನೇಕ ಜನ ಕಾಂಗ್ರೆಸ್ ಗೆ ಆಗಮಿಸಲಿದ್ದಾರೆ ಎಂದು ಬಾಂಬ್ ಸಿಡಿಸಿದರು.
ಮಹದಾಯಿ ಕಾಮಗಾರಿಗೆ ವಿಳಂಬ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರ ನೀಡಬೇಕು. ಇದೇ ಮಹದಾಯಿಯಲ್ಲಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ರು. ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ?, ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಅವರಿಗೂ ಒಂದು ಗೌರವ. ಪ್ರಹ್ಲಾದ್ ಜೋಶಿ ಯಾಕೆ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಉತ್ತರಿಸಲಿ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ, ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ ಎಂದು ಹೇಳಿದರು.