ಈದ್ಗಾ ಮೈದಾನದಲ್ಲಿ ಗಣೆಶೋತ್ಸವ ; ಬಿಗಿ ಭದ್ರತೆಯಲ್ಲಿ ಗಣೇಶಮೂರ್ತಿ ಮೆರವಣಿಗೆ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಬಿಗಿ ಭದ್ರತೆಯಲ್ಲಿ ಗಣೇಶನ ಮೆರವಣಿಗೆ ನಡೆಯಿತು, ಮೂರು ಸಾವಿರ ಮಠದ ಆವರಣದಿಂದ ಮೆರವಣಿಗೆ ನಡೆಯಿತು. ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿವೆ.
ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸುತ್ತಿವೆ, ಬಿಜೆಪಿ, ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ, ಡಿಸಿಪಿ ರಾಜೀವ್ ಎಂ. ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳು ಪಾಲ್ಗೊಂಡಿವೆ. ಇನ್ನೊಂದು ಕಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಾಕ ಪೊಲೀಸ್ ಭದ್ರತೆ ನಿಯೋಜನೆ ಮಾಡಿದ್ದಾರೆ. ನಾಲ್ಕು ಸಂಘಟನೆಗಳಲ್ಲಿ ಒಂದಕ್ಕೆ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಮಾತ್ರ ಅನುಮತಿ ನೀಡಲಾಗಿದೆ, ಉಳಿದ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿಯ 1500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸೇರಿದಂತೆ ಕೆಎಸ್ಆರ್ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ವತಃ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಉಸ್ತುವಾರಿ ವಹಿಸಿದ್ದಾರೆ.

Curated by Shivamoorthi M|TimesXP Kannada|19 Sept 2023