ಹೌದು.. ಸೆಂಟ್ರಲ್ ಕ್ಷೇತ್ರದಲ್ಲಿರುವ ರಾಜಕಾಲುವೆಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ. ಒತ್ತುವರಿ ತೆರವು, ತ್ಯಾಜ್ಯ ವಿಲೇವಾರಿ, ಹೂಳೆತ್ತುವುದು ಸೇರಿ ಹಲವು ಕೆಲಸ ಮಾಡಲು ಸೂಚಿಸಿದ್ದೇನೆ ಎಂದು ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಮಾಹಿತಿ ನೀಡಿದ್ದಾರೆ.
ಮಳೆಗಾಲ ಬಂದಾಗಲೆಲ್ಲ ನಾಲೆಯ ಪಕ್ಕದಲ್ಲಿರುವ ಜನರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಮಳೆ ನೀರು ಸರಾಗವಾಗಿ ಹಾದು ಹೋಗಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ನಾಲೆಗಳಲ್ಲಿ ಹಲವು ವ್ಯಾಪಾರಿಗಳು ತ್ಯಾಜ್ಯ ಸುರಿಯುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಪಾಲಿಕೆಯ ಪ್ರತಿ ವಲಯ ಕಚೇರಿಗಳಲ್ಲಿ ಮಳೆಗಾಲದಲ್ಲಿ ನೀರು ನಿರ್ವಹಣೆ ಸಂಬಂಧ 6 ಲಕ್ಷ ರೂಪಾಯಿ ಅನುದಾನ ಇಡಲಾಗಿದೆ ಎಂದು ಪಾಲಿಕೆ ಆಯುಕ್ತರು ಮಾಹಿತಿ ನೀಡಿದ್ದಾರೆ. ">
ವರುಣನ ಅವಾಂತರ ತತ್ತರಿಸಿದ ಹುಬ್ಬಳ್ಳಿ; ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಮಹೇಶ್ ಟೆಂಗಿನಕಾಯಿ
Curated by Shivamoorthi M|Vijaya Karnataka Web|25 May 2023
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಳೆಯಾದರೇ ಸಾಕು, ಸಾಕಷ್ಟು ಅವಾಂತರ ಸೃಷ್ಟಿಯಾಗುತ್ತೆ. ಈ ನಿಟ್ಟಿನಲ್ಲಿ ನೂತನ ಶಾಸಕ ಮಹೇಶ್ ಟೆಂಗಿನಕಾಯಿ ಅವರು, ಜನರ ಸಮಸ್ಯೆ ಆಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಜೊತೆಗೆ ಕ್ಷೇತ್ರದಲ್ಲಿ ರೌಂಡ್ ಹಾಕಿದ್ದಾರೆ. ದೇಶಪಾಂಡೆನಗರದಿಂದ ನ್ಯೂ ಕಾಟನ್ ಮಾರ್ಕೆಟ್ಗೆ ಹಾದು ಹೋಗುವ ನಾಲಾವನ್ನು ವೀಕ್ಷಣೆ ಮಾಡಿ, ಸಮಸ್ಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ.ಹೌದು.. ಸೆಂಟ್ರಲ್ ಕ್ಷೇತ್ರದಲ್ಲಿರುವ ರಾಜಕಾಲುವೆಗಳನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ. ಒತ್ತುವರಿ ತೆರವು, ತ್ಯಾಜ್ಯ ವಿಲೇವಾರಿ, ಹೂಳೆತ್ತುವುದು ಸೇರಿ ಹಲವು ಕೆಲಸ ಮಾಡಲು ಸೂಚಿಸಿದ್ದೇನೆ ಎಂದು ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಮಾಹಿತಿ ನೀಡಿದ್ದಾರೆ.ಮಳೆಗಾಲ ಬಂದಾಗಲೆಲ್ಲ ನಾಲೆಯ ಪಕ್ಕದಲ್ಲಿರುವ ಜನರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಮಳೆ ನೀರು ಸರಾಗವಾಗಿ ಹಾದು ಹೋಗಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.ನಾಲೆಗಳಲ್ಲಿ ಹಲವು ವ್ಯಾಪಾರಿಗಳು ತ್ಯಾಜ್ಯ ಸುರಿಯುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಪಾಲಿಕೆಯ ಪ್ರತಿ ವಲಯ ಕಚೇರಿಗಳಲ್ಲಿ ಮಳೆಗಾಲದಲ್ಲಿ ನೀರು ನಿರ್ವಹಣೆ ಸಂಬಂಧ 6 ಲಕ್ಷ ರೂಪಾಯಿ ಅನುದಾನ ಇಡಲಾಗಿದೆ ಎಂದು ಪಾಲಿಕೆ ಆಯುಕ್ತರು ಮಾಹಿತಿ ನೀಡಿದ್ದಾರೆ.