ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ವಿಳಂಬಕ್ಕೆ ಪ್ರಲ್ಹಾದ್ ಜೋಶಿ ಕಾರಣ : ವಿರೇಶ ಸೊಬರದಮಠ
1036 views
dharwad ವಿಡಿಯೋಗಳಿಗೆ ಚಂದಾದಾರರಾಗಿ
ಲೈಕ್
ಕಾಮೆಂಟ್ಸ್ ಮಾಡಿ
ಶೇರ್
ಹುಬ್ಬಳ್ಳಿ:ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು vರಾಜಕಾರಣ ಮಾಡುತ್ತಿದ್ದಾರೆ. ಈ ಹಿಂದೆ ಪ್ರಧಾನಮಂತ್ರಿ ಬಳಿ ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋದಾಗ ಈ ಹೋರಾಟ ಕಾನೂನು ಹೋರಾಟ ಎಂದು ಹಾದಿ ತಪ್ಪಿಸುವ ಕೆಲಸ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಹದಾಯಿ ಕಳಸಾ-ಬಂಡೂರಿ ಯೋಜನೆ ಅನುಷ್ಠಾನದಲ್ಲಿ ಅನುಸರಿಸಿದ ಧೋರಣೆ ಕುರಿತು ಕಿರು ಹೊತ್ತಿಗೆ ಬಿಡುಗಡೆಗೊಳಿಸಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಡುವಳಿಕೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದು ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಹೇಳಿದರು.
dharwad|Curated by Anuja Burge|TimesXP KannadaUpdated: 15 Jul 2023, 2:48 pm