ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರ ಕೈ ಬಳೆ ವಿಚಾರ, ಸರಕಾರದ ಮಾರ್ಗಸೂಚಿಗೆ ಬೊಮ್ಮಾಯಿ ಟೀಕೆ
2216 views
haveri ವಿಡಿಯೋಗಳಿಗೆ ಚಂದಾದಾರರಾಗಿಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲ ಎಂಬ ಮಾರ್ಗಸೂಚಿ ವಿಚಾರ ಕುರಿತಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾತನಾಡಿ, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ ಎಂದು ಪ್ರಶ್ನಿಸಿದರು.
''ನಾನು ಸರ್ಕಾರಕ್ಕೆ ಪ್ರಶ್ನೆ ಕೇಳ್ತೇನಿ. ಈ ಹಿಂದೆ ಎಲ್ಲಾ ಹಾಕಿಕೊಂಡು ಕೆಲಸ ಮಾಡಿದ್ದಾರೆ. ಅಂದು ಯಾವ ತೊಂದರೆ ಆಗಿಲ್ಲಾ, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ಲಾ? ಬೇಕಾದಷ್ಟು ಕೆಲಸಗಳು ಇದಾವೆ, ಇವರು ಕೆಲಸಕ್ಕೆ ಬಾರದ ಕೆಲಸಗಳನ್ನು ಮಾಡ್ತಾ ಇದಾರೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಪ್ರತಿಪಕ್ಷ ನಾಯಕ ಆಯ್ಕೆಯು ನಮ್ಮ ಪಕ್ಷಕ್ಕೆ ಬಿಟ್ಟಿದ್ದು,ಆದಷ್ಟು ಬೇಗ ಮಾಡ್ತಾರೆ. ನಮ್ಮ ಪಕ್ಷ ನಿರ್ಣಯ ಮಾಡುತ್ತದೆ. 18 ನೇ ತಾರೀಕಿನ ನಂತರ ತೀರ್ಮಾನ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಅಧಿಕಾರಿದಲ್ಲಿ ಪ್ರಿಯಾಂಕಾ ಖರ್ಗೆ, ಯತೀಂದ್ರ ಸರ್ಕಾರದಲ್ಲಿ ಶ್ಯಾಡೊ ಸಿಎಂ ಆಗಿ ವರ್ತಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೆವು. ಸಿಎಂ ಆಫೀಸ್ ನಿಂದು ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡ್ತಾ ಇದ್ದಾರೆ. ಟ್ರಾನ್ಸ್ಫರ್ ಸಲುವಾಗಿ ನಾನ ಹಣ ತಗೊಂಡಿಲ್ಲಾಎಂದು ಸಿಎಂ ಹೇಳುತ್ತಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲಾ ಅಂತಾ ಜಾರಿಕೊಳ್ತಾ ಇದಾರೆ. ಇಡೀ ಅವರ ಸರ್ಕಾರ ಸಚಿವ ಸಂಪುಟದ ಸದಸ್ಯರು, ಭಂಟರು ತಗೊಳ್ತಾ ಇರೋದು ಸ್ಪಷ್ಟವಾಗಿದೆ. ಅಧಿಕಾರಿಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗ್ತಾ ಇದೆ ಎಂದರು.
ಆರ್ಎಸ್ಎಸ್ ಜಮೀನು ಮಂಜೂರು ಹಿಂಪಡೆದ ವಿಚಾರ ಕುರಿತಂತೆ ಮಾತನಾಡಿ, ಇದು ಸೇಡಿನ ರಾಜಕಾರಣ, ಅದರಲ್ಲಿ ಬಡವರ ಮಕ್ಕಳಿಗೆ, ಅನಾಥರಿಗೆ ದೊಡ್ಡ ಸಹಾಯ ಆಗಿದೆ. ಸೇಡಿನ ರಾಜಕಾರಣ ಬಹಳ ನಡೆಯೊಲ್ಲಾ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.