'ಉದಯವಾಗಲಿ ಕಲ್ಯಾಣ ಕರ್ನಾಟಕ': ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ
ಕಲಬುರಗಿ ವಿಡಿಯೋಗಳಿಗೆ ಚಂದಾದಾರರಾಗಿ
ರಾಜ್ಯದಾದ್ಯಂತ ರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದೆ. ಆದರೆ, ಕಲಬುರಗಿಯಲ್ಲಿ ತೆಲಂಗಾಣ ಮಾದರಿಯಲ್ಲಿ 'ಕಲ್ಯಾಣ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರತ್ಯೇಕ ರಾಜ್ಯ ಮಾಡುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದೆ. ಕಲಬುರಗಿಯ ಸರ್ದಾರ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಧ್ವಜಾರೋಹಣಕ್ಕೆ ಮುಂದಾದ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಹೋರಾಟಗಾರ ಎಂ ಎಸ್ ಪಾಟೀಲ್ ನರಿಬೋಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು. ಕೋರ್ಟ್ ಮಾರ್ಗವಾಗಿ ಪಟೇಲ್ ವೃತ್ತಕ್ಕೆ ಧ್ವಜಾರೋಹಣಕ್ಕೆ ಆಗಮಿಸುತ್ತಿದ್ದಾಗ ಮಾರ್ಗಮಧ್ಯೆ ಪೊಲೀಸರು ತಡೆಯೊಡ್ಡಿ ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿಧೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರೆದಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಟ್ಟ ಹಣ ಪಕ್ಕದ ಜಿಲ್ಲೆಗಳಿಗೆ ಬಳಕೆ ಮಾಡಲಾಗುತ್ತಿದೆ.
ಉದ್ಯೋಗ ನೇಮಕಾತಿ, ಮೀಸಲಾತಿ, ಮುಂಬಡ್ತಿ ವಿಷಯದಲ್ಲಿಯೂ ಕಡೆಗಣನೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿಯಲ್ಲಿಯೂ ಈ ಭಾಗಕ್ಕೆ ಅನ್ಯಾಯವಾಗಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಹೋರಾಟಗಾರರು ಈ ಸಂದದರ್ಭದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.