ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ..!; ಜನರ ಪರದಾಟ
1112 views
koppal ವಿಡಿಯೋಗಳಿಗೆ ಚಂದಾದಾರರಾಗಿಕೊಪ್ಪಳ:ಒಂದು ಕಡೆ ಕಲುಷಿತ ನೀರು ಕುಡಿದು ಜನರ ಪರದಾಟ, ಇನ್ನೊಂದೆಡೆ ಕುಡಿಯುವ ನೀರಿಗೂ ನೀರಿಗೆ ಹಾಹಾಕಾರ, ಹೌದು.. ಕೊಪ್ಪಳ ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆ ಬಾರದೇ ಜನರ ಕಷ್ಟ ಹೇಳತೀರದ್ದಾಗಿದೆ. ಒಂದು ತೊಟ್ಟು ನೀರಿಗಾಗಿ ಪರಿತಪಿಸುತ್ತಿದ್ದಾರೆ.
ಹೌದು.. ಬಿಜಕಲ್ ಗ್ರಾಮದಲ್ಲಿ ಮೊನ್ನೆಯಷ್ಟೇ ಕಲುಷಿತ ನೀರು ಕುಡಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಳು, 40ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದರು. ಇದು ಒಂದು ಗ್ರಾಮದ ಜನರ ಸಮಸ್ಯೆಯಾದ್ರೆ. ಇನ್ನೊಂದೆಡೆ ಇದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ.ಬೋದೂರು ತಾಂಡಾದಲ್ಲಿ ಕುಡಿಯು ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ನೀರು ಕೊಡಿ ಎಂದು ಅಧಿಕಾರಿಗಳಿಗೆ ಹಲವು ಭಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಕೆ.ಬೋದೂರು ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನೀರಿನ ಸಮಸ್ಯೆ ಎದುರಾಗಿದೆ. ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೊಳವೆ ಬಾವಿಯಲ್ಲಿ ನೀರಿಗಾಗಿ ಜನರು ಕಾಯುತ್ತಿದ್ದಾರೆ. ಸುಮಾರು 1500 ಜನ ಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಒಂದೇ ಕಡೆ ಜಲಮೂಲವಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದು ಕ್ಯಾರೇ ಎನ್ನುತ್ತಿಲ್ಲ ಎಂದು ಕಿಡಿಕಾರಿದ್ದಾರೆ.