ಕೂಕನಪಳ್ಳಿಯಲ್ಲಿ ಸಿದ್ದನಗೌಡ ಎಂಬುವವರ ಮನೆಯಲ್ಲಿ ಬಾಡಿಗೆ ರೂಪದಲ್ಲಿ ವಾಸವಾಗಿರುವ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್ ಬಳಕೆಯ 9990 ರೂಪಾಯಿ ಬಾಕಿ ಉಳಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಮೇ 20ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರೂ ಚಂದ್ರಶೇಖರಯ್ಯ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದ. ಈ ಮಧ್ಯೆ ಮೇ 23ರಂದು ಗ್ರಾಮ ವಿದ್ಯುತ್ ಪ್ರತಿನಿಧಿ ಶಾಮೀದ ಅಲಿ. ಬಿಲ್ ಕಲೆಕ್ಟರ್ ಮಂಜುನಾಥ ಎಂಬುವವರು ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಚಂದ್ರಶೇಖರ ಮಂಜುನಾಥ ಹಾಗು ಶಾಮೀದ್ ಅಲಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ಪ್ರಕರಣದ ನಂತರ ಮುನಿರಾಬಾದ್ ಜೆಸ್ಕಾಂ ಅಧಿಕಾರಿಗಳು ಮುನಿರಾಬಾದ್ ಪೊಲೀಸ್ ಠಾಣೆಗೆ ಗುಂಪಾಗಿ ಹೋಗಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸರು ಚಂದ್ರಶೇಖರಯ್ಯರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಿಗೋಡ ತಿಳಿಸಿದ್ದಾರೆ. ">
ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
Curated by Shivamoorthi M|Vijaya Karnataka Web|25 May 2023
ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ 200 ಯೂನಿಟ್ವರೆಗೂ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬ ಘೋಷಣೆ ಮಾಡಿದ ಬೆನ್ನಲ್ಲೇ ವಿದ್ಯುತ್ ಬಿಲ್ ಕೇಳಲು ಹೋದ ಸಿಬ್ಬಂದಿ ಯ ಮೇಲೆ ಹಲ್ಲೆ ಮಾಡುವಂಥ ಪ್ರಕರಣಗಳು ನಡೆಯುತ್ತಿವೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿಯಲ್ಲಿ ಬಾಕಿರುವ ವಿದ್ಯುತ್ ಬಿಲ್ ಕೇಳಲು ಹೋದ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ.ಕೂಕನಪಳ್ಳಿಯಲ್ಲಿ ಸಿದ್ದನಗೌಡ ಎಂಬುವವರ ಮನೆಯಲ್ಲಿ ಬಾಡಿಗೆ ರೂಪದಲ್ಲಿ ವಾಸವಾಗಿರುವ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್ ಬಳಕೆಯ 9990 ರೂಪಾಯಿ ಬಾಕಿ ಉಳಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಮೇ 20ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರೂ ಚಂದ್ರಶೇಖರಯ್ಯ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದ. ಈ ಮಧ್ಯೆ ಮೇ 23ರಂದು ಗ್ರಾಮ ವಿದ್ಯುತ್ ಪ್ರತಿನಿಧಿ ಶಾಮೀದ ಅಲಿ. ಬಿಲ್ ಕಲೆಕ್ಟರ್ ಮಂಜುನಾಥ ಎಂಬುವವರು ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಸಿಟ್ಟಿಗೆದ್ದ ಚಂದ್ರಶೇಖರ ಮಂಜುನಾಥ ಹಾಗು ಶಾಮೀದ್ ಅಲಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.ಈ ಪ್ರಕರಣದ ನಂತರ ಮುನಿರಾಬಾದ್ ಜೆಸ್ಕಾಂ ಅಧಿಕಾರಿಗಳು ಮುನಿರಾಬಾದ್ ಪೊಲೀಸ್ ಠಾಣೆಗೆ ಗುಂಪಾಗಿ ಹೋಗಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸರು ಚಂದ್ರಶೇಖರಯ್ಯರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಿಗೋಡ ತಿಳಿಸಿದ್ದಾರೆ.