ಲೋಕಸಭೆ ಚುನಾವಣೆಗೆ ಬಿಜೆಪಿಗೆ ಬೆಂಬಲ ಘೋಷಿಸಿದ ಜನಾರ್ದನ ರೆಡ್ಡಿ..!
ಕೊಪ್ಪಳ ವಿಡಿಯೋಗಳಿಗೆ ಚಂದಾದಾರರಾಗಿ
ಕೊಪ್ಪಳ: ಜಗದೀಶ್ ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬೆನ್ನಲ್ಲೇ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಕಡೆ ಒಲವು ತೋರಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ದ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ಕುಷ್ಟಗಿಯಲ್ಲಿ ಮಾತನಾಡಿದ ಅವರು, ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಬಿಜೆಪಿಯೊಂದಿಗೆ ಹೊಂದಾಣಿಕೆ ಇಲ್ಲದೆ ಲೋಕಸಭೆ ಸ್ಪರ್ಧಿಸಿದರೂ ಮೋದಿ ಪ್ರಧಾನಿಯಾಗಲು ಬೆಂಬಲ ನೀಡುತ್ತೇನೆ. ಆದರೆ ಕೆಆರ್ಪಿಪಿ ಪಕ್ಷದಿಂದ ಸ್ಪರ್ಧೆ. ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ. ಬಿಜೆಪಿ ಬೆಂಬಲಿಸುತ್ತೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದರು.
ಸಿದ್ದರಾಮಯ್ಯ ಸರಕಾರದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಕೇವಲ ಗ್ಯಾರಂಟಿ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ಅಂಜನಾದ್ರಿ ಅಭಿವೃದ್ಧಿಗೆ ಒತ್ತು, ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿಯಾಗಲಿದೆ. ಇಲ್ಲಿಯ ದೇವಸ್ಥಾನದ ಮೂಲ ಸ್ವರೂಪ ಬದಲಾವಣೆ ಮಾಡೋದಿಲ್ಲ, ಆದರೆ ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದು ಹೇಳಿದರು.
ಫೆಬ್ರುವರಿ ಅಂತ್ಯಕ್ಕೆ ಆನೇಗೊಂದಿ ಉತ್ಸವ ನಡೆಸಲಾಗುವುದು. ಈ ಕುರಿತು ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ವೇಸ್ಟ್. ಈಗಾಗಲೇ ಕಸದ ಬುಟ್ಟಿ ಸೇರಿದ್ದಾರೆ. ಅವರು ಅಭಿವೃದ್ದಿಗೆ ಅಡ್ಡಿಯಾಗಿದ್ದಾರೆ ಎಂದರು.