'ನಮ್ಮ ನೀರು, ನಮ್ಮ ಹಕ್ಕು' ಎಂದಿದ್ದ ಕಾಂಗ್ರೆಸ್, ಕಾವೇರಿ ವಿಚಾರದಲ್ಲಿ ಏನಾಯಿತು: ಬಿವೈ ವಿಜಯೇಂದ್ರ ಪ್ರಶ್ನೆ
1766 views
mandya ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯದಲ್ಲಿ ಬಿಜೆಪಿಯಿಂದ ಚಡ್ಡಿ ಚಳವಳಿ ಆರಂಭಿಸಲಾಗಿದೆ. ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಹೋರಾಟ ಜೋರಾಗಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಮುಂದುವರಿದಿವೆ. ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಜೆಪಿ ಕಚೇರಿಯ ಬಳಿ ಚಡ್ಡಿ ಚಳವಳಿ ನಡೆಯುತ್ತಿದೆ. ಬಿಜೆಪಿ ವತಿಯಿಂದ ಚಳವಳಿಯಲ್ಲಿ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ, ಶಾಸಕ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದಾರೆ.
ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿ, ''ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಸಾಕಷ್ಟು ನಿರೀಕ್ಷೆಯನ್ನು ಕಾಂಗ್ರೆಸ್ ಹುಟ್ಟಿ ಹಾಕಿದರು. ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದರು. ನೀರಾವರಿ ಹೋರಾಟವನ್ನು ಕಾಂಗ್ರೆಸ್ಸಿಗರು ಮಾಡಿದರು. ಅದಕ್ಕಾಗಿ ರಾಜ್ಯದ ಜನ ಕಾಂಗ್ರೆಸ್ಗೆ ಅಧಿಕಾರ ಕೊಟ್ಟರು. ಡಿಕೆ ಶಿವಕುಮಾರ್ ಮೇಕೆದಾಟಿಗಾಗಿ ಪಾದಯಾತ್ರೆ ಮಾಡಿದ್ದರು. ನಮ್ಮ ನೀರು, ನಮ್ಮ ಹಕ್ಕು ಎಂಬ ಹೋರಾಟ ಮಾಡಿದ್ದರು. ಆದರೆ, ಇಂದು ಕಾಂಗ್ರೆಸ್ ಬಣ್ಣ ಬಯಲಾಗಿದೆ'' ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಾಯಿ ಬಡಿದುಕೊಂಡು ಬಿಜೆಪಿ ಕಾರ್ಯಕರ್ತರ ಆಕ್ರೋಶ. ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.