ಚಲುವರಾಯಸ್ವಾಮಿ 300-400 ಕೋಟಿ ಲೂಟಿ ಹೊಡೆದಿದ್ದಾರೆ ; ಸುರೇಶ್ ಗೌಡ ಆರೋಪ
1088 views
ಮಂಡ್ಯ ವಿಡಿಯೋಗಳಿಗೆ ಚಂದಾದಾರರಾಗಿಮಂಡ್ಯ: ಚಲುವರಾಯಸ್ವಾಮಿ 300 ರಿಂದ 400 ಕೋಟಿ ಲೂಟಿ ಹೊಡೆದಿದ್ದಾರೆ, ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ಕೊಡಬೇಕು ಎಂದು ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿದ ದುಡ್ಡನ್ನ ಏರ್ಲಿಫ್ಟ್ ಮಾಡ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಿದ್ದಾರೆ ಎನ್ನುತ್ತಿದ್ರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನ ಏರ್ಲಿಫ್ಟ್ ಮಾಡ್ತಿದೆ. ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ.ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ರಾನ್ಸ್ಫರ್ನಲ್ಲಿ 150 ಕೋಟಿ, ಜಲಧಾರೆ ಯೋಜನೆಯಲ್ಲಿ 100 ಕೋಟಿ, ಅಧಿಕಾರಗಳ ಬಳಿ ಕೋಟಿ ಕೋಟಿ ಲೂಟಿ ಮಾಡಿದ್ದಾರೆ. 300 ಕೋಟಿ ಲೂಟಿಯನ್ನು ಚಲುವರಾಯಸ್ವಾಮಿ ಒಬ್ಬರೇ ಮಾಡಿದ್ದಾರೆ. ಇಡೀ ಕಾಂಗ್ರೆಸ್ ಹಣ ಏರ್ಲಿಫ್ಟ್ ಮಾಡ್ತಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಿಂದ ಫಂಡ್ ಹೋಗ್ತಿದೆ ಎಂದು ಕಿಡಿಕಾರಿದ್ದಾರೆ.
ಚಲುವರಾಯಸ್ವಾಮಿಗೆ ಬ್ರೈನ್ ಮ್ಯಾಪಿಂಗ್ ಮಾಡಬೇಕು. ಎಲ್ಲೆಲ್ಲಿ ಎಷ್ಟೆಷ್ಟು ತಿಂದಿದ್ದಾನೆ ಗೊತ್ತಾಗುತ್ತದೆ. ಬೆಂಗಳೂರಿನಲ್ಲಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದೆ, ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷದ್ದು, ಅಲ್ಲಿ ಚಲುವರಾಯಸ್ವಾಮಿ ಎಷ್ಟು ಬ್ಲಾಕ್ ಮನಿ ವೈಟ್ ಮಾಡಿದ್ದಾರೆ, ಅದೆಲ್ಲವೂ ಆಚೆ ಬರ್ತದೆ, ಬೆಳ್ಳೂರು ಕ್ರಾಸ್ನಲ್ಲಿ ಪೆಟ್ರೋಲ್ ಬ್ಯಾಂಕ್ ಮಾಲೀಕರತ್ರ ಎಷ್ಟು ಕಲೆಕ್ಷನ್ ಮಾಡ್ತಿದ್ದಾರೆ. ಎಲ್ಲವೂ ಜನರಿಗೆ ಗೊತ್ತಿದೆ ಎಂದು ಹೇಳಿದರು.
ಮೆಜೆಸ್ಟಿಕ್ನಲ್ಲಿರುವ ಕೋ ಆಪರೇಟಿವ್ ಸೊಸೈಟಿ ಸರಿಯಾಗಿ ತನಿಖೆ ನಡೆಸಿದರೆ ಸಾಕು. ಸಿದ್ದರಾಮಯ್ಯ ತನಿಖೆ ಮಾಡಿಸಿದ್ರೆ ಬ್ಲಾಕ್ ಹೇಗೆ ವೈಟ್ ಆಗ್ತಿದೆ. ಯಾವ ಯಾವ ಥಿಯೇಟರ್ ತಗೋಳ್ಳದಕ್ಕೆ ಸಹಾಯ ಆಗಿದೆ ಗೊತ್ತಾಗುತ್ತೆ. ತಿಂದವನು ಕಕ್ಕಲೇ ಬೇಕು, ಎಲ್ಲ ಮುಂದೆ ಗೊತ್ತಾಗುತ್ತೆ ಎಂದು ಹೇಳಿದರು.