ಅದ್ದೂರಿಯಾಗಿ ನಡೆದ ಮಂಗಳೂರು ರಥೋತ್ಸವ ; ಲಕ್ಷಾಂತರ ಭಕ್ತರು ಭಾಗಿ
1070 views
ಮಂಗಳೂರು ವಿಡಿಯೋಗಳಿಗೆ ಚಂದಾದಾರರಾಗಿಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು . ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು . ಯಜ್ಞಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು . ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಪಾಲ್ಗೊಂಡು ಪುನೀತರಾದರು .