ಚಾಮುಂಡಿ ಬೆಟ್ಟದಲ್ಲಿ ನಟ ಕಿಚ್ಚ ಸುದೀಪ್ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಭೇಟಿ ನೀಡಿದರು.ನಾಡಿನ ಅಧಿದೇವತೆ ನೆಲೆ ನಿಂತಿರುವ ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಸುದೀಪ್ ಪೂಜೆ ಸಲ್ಲಿಸಿದರು. ಶಕ್ತಿ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥಿಸಿದರು. ನಟ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಶಿಳ್ಳೆ ಕೇಕೆ ಜೈಕಾರ ಹಾಕಿದರು ಹಾಗೂ ನೆಚ್ಚಿನ ನಾಯಕ ನಟನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು.