Nanjanagud Utsava : ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆದ ನಂಜನಗೂಡು ತೆಪ್ಪೋತ್ಸವ!
1072 views
ಮೈಸೂರು ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಡೆದ ದೊಡ್ಡ ಜಾತ್ರೆ ಅಂಗವಾಗಿ ಮಂಗಳವಾರ ರಾತ್ರಿ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ದೇವಾಲಯದಿಂದ ತಂದ ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಕಪಿಲಾ ನದಿ ತೀರದಲ್ಲಿರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು .
ಬಣ್ಣ ಬಣ್ಣದ ಹೂವು ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿರುವ ಯಾಂತ್ರಿಕ ದೋಣಿಯಲ್ಲಿ ಉತ್ಸವ ಮೂರ್ತಿಗಳನ್ನು ಕೂರಿಸಲಾಯಿತು .
ನಂತರ ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಸಂಚರಿಸಿದ ತೆಪ್ಪೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.
ತೆಪ್ಪೋತ್ಸವ ಮುಗಿದ ಬಳಿಕ ಉತ್ಸವ ಮೂರ್ತಿಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು, ದಾರಿ ಉದ್ದಕ್ಕೂ ಭಕ್ತರು ಶ್ರೀಕಂಠೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗೆ ಪೂಜೆಗೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.