ಲೋಕಸಭೆ ಚುನಾವಣೆವರೆಗೂ ಕಾದು ನೋಡಿ, ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತೆ ; ಬಿವೈ ವಿಜಯೇಂದ್ರ
1049 views
mysuru ವಿಡಿಯೋಗಳಿಗೆ ಚಂದಾದಾರರಾಗಿಮೈಸೂರು:ಕೇಂದ್ರದ ವರಿಷ್ಠ ನಾಯಕರು ಅತ್ಯಂತ ಮಹತ್ವದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ನನಗೆ ನೀಡಿದ್ದಾರೆ. ಈ ಹುದ್ದೆಯ ಮಹತ್ವವನ್ನು ಅರಿತುಕೊಂಡು ಪಕ್ಷದ ಹಿರಿಯ ನಾಯಕರು ಹಾಗು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವುದು ಮೊದಲ ಗುರಿ. ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಎರಡನೇ ಗುರಿ. ಲೋಕಸಭೆ, ವಿಧಾನಸಭೆ ಚುನಾವಣೆಗೆ ನೀಡುವ ಮಹತ್ವವನ್ನು ಜಿಲ್ಲಾ ತಾಲ್ಲೂಕು ಪಂಚಾಯತ್ ಚುನಾವಣೆಗೂ ನೀಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರಿಗೆ ಭ್ರಮ ನಿರಸನವಾಗಿದೆ. ಸಚಿವ ಶಾಸಕರ ನಡುವೆ ಸಮನ್ವಯತೆ ಇಲ್ಲ. ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ. ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸುವುದನ್ನೇ ಡಿಕೆ ಶಿವಕುಮಾರ್ ಗುರಿಯಾಗಿಸಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ ಎಂದು ಹೇಳಿದರು.
ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ದಿನ ಬೆಳಗಾದರೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡುತ್ತಿದ್ದ 4 ಸಾವಿರ ಅನುದಾನವನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದನಂತರ ಕಡಿತ ಮಾಡಲಾಗಿದೆ. ಇದು ರೈತ ವಿರೋಧಿ ಸರ್ಕಾರ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರ ಸ್ವಂತ ಜಿಲ್ಲೆಯಲ್ಲೇ ರೈತರ ಪ್ರತಿಭಟನೆ ಹತ್ತಿಕ್ಕುವ ಕೆಲಸ ನಡೆದಿದೆ ಎಂದು ಹೇಳಿದರು..
ಬಿಜೆಪಿಯಲ್ಲಿ ದೊಡ್ಡ ಮಟ್ಟದ ಅಸಮಾಧಾನ ಇಲ್ಲ. ಸಣ್ಣಪುಟ್ಟ ಅಸಮಾಧಾನ ಸಹಜ. ಬಸವವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಬೆಲ್ಲದ್ ಅವರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ ನಂತರವಷ್ಟೇ ಬಿಜೆಪಿ ಸಭೆಯಿಂದ ಹೊರ ನಡೆದಿದ್ದಾರೆ. ಅವರೆಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತೇನೆ. ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.