ತಮಿಳುನಾಡಿಗೆ ನೀರು ಬಿಟ್ಟಿದ್ದಕ್ಕೆ ಆಕ್ರೋಶ ; ಡಿಕೆಶಿ ತವರಲ್ಲೇ ಭಾರಿ ಪ್ರತಿಭಟನೆ
1104 views
ramanagara ವಿಡಿಯೋಗಳಿಗೆ ಚಂದಾದಾರರಾಗಿರಾಮನಗರ:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗ್ತಿದೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ರಸ್ತೆ ತಡೆದು ಆಕ್ರೋಶ ಹೊರಹಾಕಿದ್ದಾರೆ. ಡಿ.ಕೆ.ಶಿವಕುಮಾರ್ - ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಕನಕಪುರದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಹೋರಾಟ ಮಾಡಿದ್ದಾರೆ.