ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ದಾಖಲಿಸಿ, ಗಡಿಪಾರು ಆದೇಶ ; ಹಾಲಪ್ಪ ಕಿಡಿ
1518 views
shivamogga ವಿಡಿಯೋಗಳಿಗೆ ಚಂದಾದಾರರಾಗಿಶಿವಮೊಗ್ಗ:ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಗಡಿಪಾರು ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಆರ್.ಸೆಲ್ವಮಣಿಗೆ ಮನವಿ ಸಲ್ಲಿಸಿದರು.
ಕೆಲ ದಿನಗಳ ಹಿಂದೆ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿ ಸಾವರ್ಕರ್, ಸೂಲಿಬೆಲೆ ಪಠ್ಯ ಕಿತ್ತುಬಿಸಾಡಿದ್ದೇವೆಂದು ಹೇಳಿಕೆ ನೀಡಿದ್ದ ಮಧು ಬಂಗಾರಪ್ಪ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿದ್ದರು. ಅಂದು ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಕೇಸ್ ಜಡಿದು ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಸೇರಿದಂತೆ ಹಲವರನ್ನ ಸಂಜೆವರೆಗೂ ಠಾಣೆಯಲ್ಲಿ ಕೂರಿಸಿದ್ದರು.
ನಂತರ ಶಿವಮೊಗ್ಗ ಶಾಸಕ ಎಸ್ಎನ್ ಚೆನ್ನಬಸಪ್ಪ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟಿಸಿ ಕಾರ್ಯಕರ್ತರನ್ನ ಬಿಡುಗಡೆಗೊಳಿಸಿದ್ದರು. ಆದರೆ ಘಟನೆಗೆ ಎರಡು ದಿನಗಳ ಮೊದಲು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕುವೆಂಪು ವಿಶ್ವವಿದ್ಯಾಲಯಕ್ಕೆ ಬಂದ ಸಮಯ ಎನ್ ಎಸ್ ಯು ಐ ಕಾರ್ಯಕರ್ತರು ಪ್ರತಿಭಟಿಸಿದ್ದರೂ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಇದರಿಂದ ಕುಪಿತರಾಗಿದ್ದ ಬಿಜೆಪಿ ಮುಖಂಡರಿಗೆ ಶಿವಮೊಗ್ಗ ಪೊಲೀಸರು ಮೇಲಿಂದ ಮೇಲೆ ಶಾಕ್ ನೀಡುತ್ತಿದ್ದಾರೆ. ಸಾಗರ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆಗೆ ಪೊಲೀಸರು ನೋಟೀಸ್ ಜಾರಿ ಮಾಡಿ ನಾಳೆ ಗಡಿಪಾರು ವಿಚಾರಣೆಗೆ ಬನ್ನಿ ಎಂದಿದ್ದಾರೆ.
ಇದರಿಂದ ರೊಚ್ಚಿಗೆದ್ದ ಸಾಗರದ ಮಾಜಿ ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿಡಿ ಮೇಘರಾಜ್ ಸೇರಿ ಹಾಲಿ ಹಾಗೂ ಮಾಜಿ ಶಾಸಕರೆಲ್ಲಾ ಜಿಲ್ಲಾಧಿಕಾರಿ ಕಚೇರಿಗೆ ದಾಂಗುಡಿ ಇಟ್ಟರು. ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಿ ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಹರತಾಳು ಹಾಲಪ್ಪ, ಜಿಲ್ಲಾಧಿಕಾರಿಯನ್ನ ಭೇಟಿ ಮಾಡಿ ಕಾಂಗ್ರೆಸ್ ಅಧಿಕಾರದಲ್ಲಿ ಪುಡಾರಿಗಳ ಕಿತಾಪತಿ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು. ಪರಿವಾರದ ನಾಯಕರು, ಬಿಜೆಪಿ ಮುಖಂಡರಿಗೆ ಗಡಿಪಾರು ಆದೇಶದ ಫೈಲ್ ಸಿದ್ಧಮಾಡುತ್ತಿದ್ದಾರೆ. ಸಾಗರದ ರೈತನ ಮಗನಿಗೆ ಗಡಿಪಾರ್ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯಪಾಲರ ಕಾರ್ಯಕ್ರಮಕ್ಕೆ ಪಾಸ್ ಪಡೆದು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಸಾಗರ-ಹೊಸನಗರ ಭಾಗದಲ್ಲಿ ಗೂಂಡಾಗಿರಿ ಹೆಚ್ಚಾಗಿದೆ ಎಂದರು.