ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲು; ವಾಪಸ್ ಪಡೆಯದಿದ್ರೆ ಉಗ್ರ ಹೋರಾಟ ; ಟಿಡಿ ಮೇಘರಾಜ್
1615 views
shivamogga ವಿಡಿಯೋಗಳಿಗೆ ಚಂದಾದಾರರಾಗಿಶಿವಮೊಗ್ಗ:ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಗಡಿಪಾರು ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಆರ್.ಸೆಲ್ವಮಣಿಗೆ ಮನವಿ ಸಲ್ಲಿಸಿದರು.
ಕೆಲ ದಿನಗಳ ಹಿಂದೆ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿ ಸಾವರ್ಕರ್, ಸೂಲಿಬೆಲೆ ಪಠ್ಯ ಕಿತ್ತುಬಿಸಾಡಿದ್ದೇವೆಂದು ಹೇಳಿಕೆ ನೀಡಿದ್ದ ಮಧು ಬಂಗಾರಪ್ಪ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿದ್ದರು. ಅಂದು ಪೊಲೀಸರು ಕರ್ತವ್ಯಕ್ಕೆ ಅಡ್ಡಿ ಕೇಸ್ ಜಡಿದು ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಸೇರಿದಂತೆ ಹಲವರನ್ನ ಸಂಜೆವರೆಗೂ ಠಾಣೆಯಲ್ಲಿ ಕೂರಿಸಿದ್ದರು.
ನಂತರ ಶಿವಮೊಗ್ಗ ಶಾಸಕ ಎಸ್ಎನ್ ಚೆನ್ನಬಸಪ್ಪ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟಿಸಿ ಕಾರ್ಯಕರ್ತರನ್ನ ಬಿಡುಗಡೆಗೊಳಿಸಿದ್ದರು. ಆದರೆ ಘಟನೆಗೆ ಎರಡು ದಿನಗಳ ಮೊದಲು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಕುವೆಂಪು ವಿಶ್ವವಿದ್ಯಾಲಯಕ್ಕೆ ಬಂದ ಸಮಯ ಎನ್ ಎಸ್ ಯು ಐ ಕಾರ್ಯಕರ್ತರು ಪ್ರತಿಭಟಿಸಿದ್ದರೂ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಇದರಿಂದ ಕುಪಿತರಾಗಿದ್ದ ಬಿಜೆಪಿ ಮುಖಂಡರಿಗೆ ಶಿವಮೊಗ್ಗ ಪೊಲೀಸರು ಮೇಲಿಂದ ಮೇಲೆ ಶಾಕ್ ನೀಡುತ್ತಿದ್ದಾರೆ. ಸಾಗರ ಗ್ರಾಮಾಂತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆಗೆ ಪೊಲೀಸರು ನೋಟೀಸ್ ಜಾರಿ ಮಾಡಿ ನಾಳೆ ಗಡಿಪಾರು ವಿಚಾರಣೆಗೆ ಬನ್ನಿ ಎಂದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ದ್ವಿಮುಖ ನೀತಿ ಪ್ರದರ್ಶನ ಮಾಡುತ್ತಿದೆ. ಮಧು ಬಂಗಾರಪ್ಪನವರ ಪಠ್ಯ ಕುರಿತ ಅಗೌರವ ಹೇಳಿಕೆಗೆ ನಮ್ಮ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿದ್ದರು. ಅವರ ಮೇಲೆ ಸ್ವಯಂಪ್ರೇರಿತ ದೂರು ದಾಖಲು ಮಾಡಿದ್ದಾರೆ. ಇದನ್ನ ಕೇಳಲು ಹೋದ ನಮ್ಮ ಶಾಸಕರನ್ನ ಅಗೌವರದಿಂದ ಕಂಡಿದ್ದಾರೆ. ನಿರಂತರ ದಬ್ಬಾಳಿಕೆ ಮಾಡುತ್ತಿದ್ದಾರೆ. ಕ್ರಿಯಾಶೀಲ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗುತ್ತಿದೆ. ಇವುಗಳನ್ನ ಹಿಂಪಡೆಯದೇ ಹೋದರೆ ಉಗ್ರ ಹೋರಾಟಕ್ಕೆ ಸಿದ್ಧವಾಗಬೇಕಾಗುತ್ತೆ ಎಂದು ಎಚ್ಚರಿಸಿದರು.