ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿಮುಹೂರ್ತ ಸಂಪನ್ನಉಡುಪಿ: ಭಾವಿ ಪರ್ಯಾಯ ಶ್ರೀಪುತ್ತಿಗೆ ಮಠದ ಪುತ್ತಿಗೆ ಪರ್ಯಾಯದ 2024, 26 ರ ಅಂಗವಾಗಿ ಶ್ರೀಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ “ಅಕ್ಕಿ ಮುಹೂರ್ತ’ವು ಗುರುವಾರ ಪುತ್ತಿಗೆ ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.