Explainer Video: ಬಿಜೆಪಿ, ಜೆಡಿಎಸ್ಗೆ ಕಾಂಗ್ರೆಸ್ ಟಕ್ಕರ್?, ಚುನಾವಣಾ ರಣತಂತ್ರವೇನು?
1366 views
lok sabha elections ವಿಡಿಯೋಗಳಿಗೆ ಚಂದಾದಾರರಾಗಿಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷವಾದ್ರೂ ಕಾಂಗ್ರೆಸ್ ಪಕ್ಷ ರಾಜ್ಯದ ಮಟ್ಟಿಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಏಕಾಂಗಿ ಹೋರಾಟ ನಡೆಸೋದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನ ಕಣಕ್ಕಿಳಿಸುವ ಸಂಬಂಧ ನಾಯಕರು ಸಮಾಲೋಚನೆ ನಡೆಸಲಿದ್ದಾರೆ. ಜೆಡಿಎಸ್, ಬಿಜೆಪಿ ದೋಸ್ತಿಯಾದ್ರೆ ಕಾಂಗ್ರೆಸ್ ರಣತಂತ್ರ ಏನಿರಬಹುದು ಎಂಬ ಕುತೂಹಲವೂ ಇದೆ.
ಎಲ್ಲರಿಗೂ ಗೊತ್ತಿರುವ ಹಾಗೆ ಕರ್ನಾಟಕದಲ್ಲಿ ಪ್ರಬಲವಾಗಿರೋದೇ ಮೂರು ಪಕ್ಷಗಳು. ಈ ಪೈಕಿ ಕೇಂದ್ರದ ಆಡಳಿತಾರೂಢ ಬಿಜೆಪಿ ಪಕ್ಷವು ಕಾಂಗ್ರೆಸ್ನ ನೇರ ಎದುರಾಳಿ. ಇನ್ನು ಜೆಡಿಎಸ್ ಪಕ್ಷ ಈವರೆಗೂ ಯಾವುದೇ ಮೈತ್ರಿ ಕೂಟ ಸೇರಿಲ್ಲ. ಒಂದು ವೇಳೆ ಜೆಡಿಎಸ್ ಪಕ್ಷ ಇಂಡಿಯಾ ಮೈತ್ರಿ ಕೂಟ ಸೇರಿದ್ದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗುತ್ತಿತ್ತು. ಇನ್ನು ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷ ಕಾಂಗ್ರೆಸ್ ಹೊರತಾಗಿ ಬೇರೆ ಯಾವುದೇ ಪಕ್ಷ ರಾಜ್ಯದಲ್ಲಿ ಪ್ರಬಲ ನೆಲೆ ಹೊಂದಿಲ್ಲ. ಹೀಗಾಗಿ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಬೇಕು. ಕಳೆದ ಬಾರಿ ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಜೆಡಿಎಸ್ ಕೂಡಾ ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಮಿಕ್ಕೆಲ್ಲಾ 26 ಸ್ಥಾನಗಳೂ ಬಿಜೆಪಿ ಪಾಲಾಗಿದ್ದವು. ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಚುನಾವಣೆ ಹೊತ್ತಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದೆ. ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಜನರಿಗೆ ತೃಪ್ತಿ ತಂದಿದೆ. ಹೀಗಾಗಿ, ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ವಿಚಾರಗಳೂ ಕಾಂಗ್ರೆಸ್ ಪಕ್ಷಕ್ಕೆ ಮತಗಳಾಗಿ ಪರಿವರ್ತನೆ ಆಗಬಹುದು ಅನ್ನೋ ನಂಬಿಕೆ ಕಾಂಗ್ರೆಸ್ ಹೈಕಮಾಂಡ್ಗೆ ಇದೆ. ಇದೇ ಕಾರಣಕ್ಕಾಗಿ ಕರ್ನಾಟಕದ ಮೇಲೆ ನಿರೀಕ್ಷೆ ಇಟ್ಟುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಸಿದ್ದತಾ ಸಭೆಗೆ ಚಾಲನೆ ನೀಡಿದೆ.
ಲೋಕಸಭಾ ಚುನಾವಣೆಗೆ 8 ತಿಂಗಳು ಬಾಕಿ ಇರುವ ಹೊತ್ತಲ್ಲೇ ಕಾಂಗ್ರೆಸ್ ಸಿದ್ದತಾ ಸಭೆ ಚುರುಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಪರಿಸ್ಥಿತಿ ಪೂರಕವಾಗಿದೆ ಎನಿಸಿದರೂ, ಒಂದಷ್ಟು ಸವಾಲುಗಳೂ ಇವೆ. ಹೀಗಾಗಿ, ಚುನಾವಣಾ ಸಿದ್ದತಾ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಸೂಕ್ತ ಕಾರ್ಯತಂತ್ರ ರೂಪಿಸಬಹುದಾಗಿದೆ. ಸಭೆಯಲ್ಲಿ ಏನೆಲ್ಲಾ ವಿಚಾರಗಳು ಚರ್ಚೆಗೆ ಬರಬಹುದು ಅನ್ನೋದ್ರ ಅಂದಾಜು ಕೂಡಾ ಸಿಕ್ಕಿದೆ.