'ಮಂಡ್ಯದ ಜನರ ಅಭಿಮಾನ ನನ್ನನ್ನು ಇಲ್ಲಿವರೆಗೂ ಕರೆದುಕೊಂಡು ಬಂದಿದೆ..' ಎಂದ ನಟಿ ಲೀಲಾವತಿ
5809 views
entertainment ವಿಡಿಯೋಗಳಿಗೆ ಚಂದಾದಾರರಾಗಿಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾವೇರಿ ಕೊಳ್ಳದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಆರ್ಎಸ್ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ, ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಚೆಗೆ ನಟ ಅಭಿಷೇಕ್ ಅಂಬರೀಶ್ ಅವರು ಮಂಡ್ಯಕ್ಕೆ ಭೇಟಿ ನೀಡಿ, ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೀಗ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್ ರಾಜ್ ಪ್ರತಿಭಟನೆಯಲ್ಲಿ ಭಾಗವಹಿಸಿ, ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಲೀಲಾವತಿ ಅವರಿಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿದ್ದರೂ, ಅದ್ಯಾವುದನ್ನೂ ಈ ಇಳಿ ವಯಸ್ಸಿನಲ್ಲಿ ಲೆಕ್ಕಿಸದೇ ಮಂಡ್ಯಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ವಿಶೇಷ. 'ನನ್ನಿಂದ ನಡೆಯಲು ಸಾಧ್ಯವಿಲ್ಲ. ಆದರೂ ಮಂಡ್ಯದ ಜನರ ಅಭಿಮಾನ ಇಲ್ಲಿವರೆಗೂ ನನ್ನ ಕರೆದುಕೊಂಡು ಬಂದಿದೆ.. ನೀರಿನ ವಿಷಯ ಎಂದಿಗೂ ಕಣ್ಣೀರಾಗಬಾರದು. ಅದು ಆನಂದಬಾಷ್ಪ ಆಗಿರಬೇಕು. ನಮ್ಮ ರಾಜ್ಯದ ರೈತರಿಗೆ ನ್ಯಾಯ ಸಿಗಲಿ' ಎಂದು ಲೀಲಾವತಿ ಅವರು ಹೇಳಿದರು.