777 Charlie: ಮೊದಲ ಚಿತ್ರಕ್ಕೇ ಅವಾರ್ಡ್ ಪಡೆದುಕೊಂಡ ಖುಷಿಯಲ್ಲಿ ನಿರ್ದೇಶಕ ಕಿರಣ್ ರಾಜ್
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿ
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿಯಲ್ಲಿ ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾ ‘777 ಚಾರ್ಲಿ’ಗೆ ‘ಅತ್ಯುತ್ತಮ ಕನ್ನಡ ಚಿತ್ರ’ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ವಿಶೇಷವೆಂದರೆ, ಇದು ನಿರ್ದೆಶಕ ಕಿರಣ್ ರಾಜ್ ಕೆ ಅವರ ನಿರ್ದೇಶನದ ಮೊದಲ ಸಿನಿಮಾ. ‘777 ಚಾರ್ಲಿ’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ದೇಶಕ ಕಿರಣ್ ರಾಜ್, 'ರಾಷ್ಟ್ರ ಪ್ರಶಸ್ತಿ ಬಂದಿರುವುದಕ್ಕೆ ತುಂಬ ಖುಷಿ ಆಗುತ್ತಿದೆ. ಇದು ಐದು ವರ್ಷಗಳ ನಮ್ಮ ಪರಿಶ್ರಮಕ್ಕೆ ಸಿಕ್ಕಿರುವ ಫಲ ಇದು. ಈ ಪ್ರಶಸ್ತಿ ನಮ್ಮ ಇಡೀ ‘777 ಚಾರ್ಲಿ’ ಸಿನಿಮಾ ತಂಡಕ್ಕೆ ಸಲ್ಲಬೇಕು. ಏಕೆಂದರೆ, ಚಾರ್ಲಿಯನ್ನು (ಶ್ವಾನ) ಇಟ್ಟುಕೊಂಡು ಶೂಟಿಂಗ್ ಮಾಡುವುದು ಸುಲಭದ ಕೆಲಸವಲ್ಲ. ಈ ಸಿನಿಮಾಗೆ ಪ್ರೇಕ್ಷಕರಿಂದಲೂ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಪ್ರಶಸ್ತಿ ಬಂದಿರುವುದಕ್ಕೆ ಸಂತಸವಾಗುತ್ತಿದೆ. ಚಿತ್ರರಂಗದ ಹಲವಾರು ಗಣ್ಯರು ನನಗೆ ಕರೆಮಾಡಿ ವಿಶ್ ಮಾಡಿದ್ದಾರೆ' ಎಂದು ಹೇಳಿದ್ದಾರೆ. ಜೊತೆಗೆ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾದ ಬಗ್ಗೆಯೂ ಕಿರಣ್ ರಾಜ್ ಮಾಹಿತಿ ಹಂಚಿಕೊಂಡಿದ್ದಾರೆ.