ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ಸೂರಜ್ ಪಾಂಚೋಲಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
1193 views
ಮನರಂಜನೆ ವಿಡಿಯೋಗಳಿಗೆ ಚಂದಾದಾರರಾಗಿಸರಿ ಸುಮಾರು 10 ವರ್ಷಗಳ ಹಿಂದೆ ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಯ ಕೋಣೆಯಲ್ಲಿ ಮೃತದೇಹವು ಪತ್ತೆಯಾಗಿತ್ತು. ಜತೆಗೆ ಜಿಯಾ ಖಾನ್ ಡೆತ್ ನೋಟ್ ಕೂಡ ಬರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಜಿಯಾ ಖಾನ್ ಅವರ ಬಾಯ್ಫ್ರೆಂಡ್ ಸೂರಜ್ ಪಾಂಚೋಲಿ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಲಾಗಿತ್ತು. ಈ ಆತ್ಮಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಶುಕ್ರವಾರ (ಏ.28) ಮಹತ್ವದ ತೀರ್ಪು ಹೊರಬಿದ್ದಿದೆ. ಈ ಪ್ರಕರಣದಲ್ಲಿ ಸೂರಜ್ ಪಾಂಚೋಲಿ ನಿರಪರಾಧಿ ಎಂದು ಕೋರ್ಟ್ ಅಂತಿಮ ತೀರ್ಪು ನೀಡಿದೆ. 'ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸೂರಜ್ ಪಾಂಚೋಲಿ ಅವರನ್ನು ಖುಲಾಸೆಗೊಳಿಸಲಾಗಿದೆ' ಎಂದು ಕೋರ್ಟ್ ಹೇಳಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸೂರಜ್ ಪಾಂಚೋಲಿ ಅಪರಾಧಿ ಎಂಬುದು ಸಾಬೀತಾಗಿದ್ದರೆ, ಗರಿಷ್ಠ 10 ವರ್ಷ ಸಜೆ ಆಗುವ ಸಾಧ್ಯತೆಗಳಿದ್ದವು. ಜಿಯಾ ಖಾನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಕಳೆದ ವಾರ ಎರಡು ಕಡೆಯ ವಾದಗಳನ್ನು ಆಲಿಸಿರುವ ನ್ಯಾಯಾಲಯವು ಶುಕ್ರವಾರ ಅಂತಿಮ ತೀರ್ಪು ನೀಡುವುದಾಗಿ ತಿಳಿಸಿತ್ತು. ಆದಿತ್ಯ ಪಾಂಚೋಲಿ ಮತ್ತು ಜರೀನಾ ವಹಾಬ್ ಪುತ್ರನಾಗಿರುವ ಸೂರಜ್ ಪಾಂಚೋಲಿ ಕೂಡ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೂರಜ್ ಪಾಂಚೋಲಿ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಮೂಡಿತ್ತು. ಇದೀಗ ಕೋರ್ಟ್ನಿಂದ ಸೂರಜ್ ನಿರಾಳಾಗಿದ್ದಾರೆ.
ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ನಟ ಸೂರಜ್ ಪಾಂಚೋಲಿ ನಿರ್ದೋಷಿ ಎಂದು ತೀರ್ಪು ನೀಡಿದ ಕೋರ್ಟ್
ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ನಟ ಸೂರಜ್ ಪಾಂಚೋಲಿ ನಿರ್ದೋಷಿ ಎಂದು ತೀರ್ಪು ನೀಡಿದ ಕೋರ್ಟ್