ಇನ್ನು ಆದಿತ್ಯ-L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯವಾಗಿದೆ. ಆದಿತ್ಯ-L1, ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯ-ಭೂಮಿಯ ವ್ಯವಸ್ಥೆಯ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ತನ್ನನ್ನು ತಾನು ಇರಿಸಿಕೊಳ್ಳುವ ಮೂಲಕ ಸೂರ್ಯನ ವರ್ತನೆಯ ಬಗ್ಗೆ ಅಭೂತಪೂರ್ವ ಮಾಹಿತಿಯನ್ನು ನೀಡುವ ಗುರಿಯನ್ನು ಹೊಂದಿದೆ. ಈ ಕುರಿತಾದ ಇನಷ್ಟು ಮಾಹಿತಿಯನ್ನು ಇಸ್ರೋ ವಿಜ್ಞಾನಿ ಎಲ್.ವಿ. ಪ್ರಸಾದ್ ಅವರು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ.