ಮದುವಣಗಿತ್ತಿಯಂತೆ ಸಿಂಗಾರಗೊಂಡ ರಾಮಮಂದಿರ ; 2,500 ಕ್ವಿಂಟಲ್ ಹೂಗಳಿಂದ ಸಿಂಗಾರ..!
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ, ಅಯೋಧ್ಯೆಯಲ್ಲಿ ಎಲ್ಲಾ ತಯಾರಿಗಳು ಭರದಿಂದ ಸಾಗುತ್ತಿವೆ, ರಾಮಮಂದಿರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಜೊತೆಗೆ ವಿವಿಧ ಹೂವುಗಳಿಂದ ಸಿಂಗಾರಗೊಂಡು ಮದುವಣಗಿತ್ತಿಯಂತೆ ಕಾಣುತ್ತಿದೆ.
ರಾಮಮಂದಿರ ಉದ್ಘಾಟನೆಗೆ ಇಡೀ ಅಯೋಧ್ಯೆ ನಗರಿಯೇ ಸಿಂಗಾರಗೊಂಡಿದೆ. ಅಯೋಧ್ಯೆ ಮಾತ್ರವಲ್ಲದೇ ಇಡೀ ದೇಶವೇ ಸಂಭ್ರಮ ಆಚರಣೆ ಮಾಡುತ್ತಿದೆ. ಇನ್ನೂ ರಾಮಮಂದಿರ ವಿಶೇಷ ನೋಡೋದಾದ್ರೆ, ಅಯೋಧ್ಯೆ ರಾಮ ಮಂದಿರವು ವಾಸ್ತುಶಿಲ್ಪದ ಅದ್ಭುತ ಪ್ರತೀಕವಾಗಿ ಕಾಣತೊಡಗಿದೆ. ಕಬ್ಬಿಣ ಅಥವಾ ಉಕ್ಕು ಬಳಸದೇ ನಿರ್ಮಿಸಲಾಗಿದೆ.
ರಾಮ ಮಂದಿರ ನಿರ್ಮಾಣ ಪ್ರದೇಶವು ಸುಮಾರು 57,000 ಚದರ ಅಡಿ ಆಗಿದ್ದು, ಕಟ್ಟಡವು ಮೂರು ಅಂತಸ್ತಿನ ರಚನೆಯಾಗಿದೆ. ಇದು ಕುತುಬ್ ಮಿನಾರ್ಗಿಂತಲೂ ಶೇಕಡ 70 ಹೆಚ್ಚು ಎತ್ತರದ್ದಾಗಿದೆ. ರಾಮ ಮಂದಿರವು ಬೃಹತ್ ಕಂಬಳ ಮೇಲೆ ನಿಂತಿದ್ದು, ಶ್ರೀ ರಾಮ ದೇವರು ಇರುವ ಅತ್ಯಂತ ಪವಿತ್ರ ಭಾಗವನ್ನು ಗರ್ಭ ಗೃಹ ಅಥವಾ ಗರ್ಭ ಗುಡಿ ಎಂದು ಹೇಳಲಾಗುತ್ತದೆ. ಮಂದಿರದ ಮೂರನೇ ಮಹಡಿಯಲ್ಲಿ ಅತಿ ಎತ್ತರದ ಶಿಖರ ರೂಪದ ಗೋಪುರವಿದೆ. ಐದು ಮಂಟಪಗಳ ಮೇಲೆ ಐದು ಶಿಖರಗಳಿದ್ದು, ಒಟ್ಟು 300 ಕಂಬಗಳು ಮತ್ತು 44 ತೇಗದ ಬಾಗಿಲುಗಳನ್ನು ಹೊಂದಿದೆ.