ಕಾವೇರಿ ಜಲ ವಿವಾದ : ಇಂದು ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ಅರ್ಜಿ ವಿಚಾರಣೆ
1234 views
news ವಿಡಿಯೋಗಳಿಗೆ ಚಂದಾದಾರರಾಗಿಕಾವೇರಿ ಜಲ ವಿವಾದ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಇದೆ, ಕಾವೇರಿ ನೀರು ಪ್ರಾಧಿಕಾರ ಸಮಿತಿ ಮತ್ತೆ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶ ನೀಡಿದೆ, ಪ್ರಾಧಿಕಾರ ಸಮಿತಿ ವಿರುದ್ಧ ರಾಜ್ಯದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಕಾವೇರಿ ಕಿಚ್ಚು ದೆಹಲಿಗೆ ಶಿಫ್ಟ್ ಆಗಿದೆ, ನಿನ್ನೆ ಸಿದ್ದರಾಮಯ್ಯ ದೆಹಲಿಯಲ್ಲಿ ರಾಜ್ಯದ ಸಂಸದರ ಜೊತೆ ಸಭೆಯನ್ನು ಮಾಡಿದ್ರು, CWMA ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ.
ಇಂದು ಸುಪ್ರೀಂ ಕೋರ್ಟ್ನಲ್ಲಿ ಕಾವೇರಿ ಅರ್ಜಿ ವಿಚಾರಣೆ ಇದೆ, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದ್ದು ತೀರ್ಪಿಗಾಗಿ ಎಲ್ಲರು ಕಾಯುತ್ತಿದ್ದಾರೆ. ಕಾವೇರಿ ಪ್ರಾಧಿಕಾರ ಸಮಿತಿಯಲ್ಲು ರಾಜ್ಯಕ್ಕೆ ನ್ಯಾಯ ಸಿಗಲಿಲ್ಲ, ಸುಪ್ರೀಂ ಕೋರ್ಟ್ ನಲ್ಲಾದ್ರು ಕರ್ನಾಟಕಕ್ಕೆ ನ್ಯಾಯ ಸಿಗುತ್ತಾ ಎನ್ನುವುದು ಇನ್ನೇನು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.
ಇಂದಿನ ಸುಪ್ರೀಂ ತೀರ್ಪಿನ ಮೇಲೆ ಕಾವೇರಿ ಕೊಳ್ಳದ ಜನರ ಭವಿಷ್ಯ ನಿಂತಿದೆ. ತೀರ್ಪು ಕರ್ನಾಟಕದ ಪರ ಬಂದ್ರೆ ಶಾಂತಿ, ಒಂದು ವೇಳೆ ವಿರುದ್ಧ ಬಂದರೆ ಕ್ರಾಂತಿಯಾಗುವ ಎಲ್ಲ ಸಾಧ್ಯತೆ ಇದೆ, ಈಗಾಗಲೇ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹೊತ್ತಿಕೊಂಡಿದ್ದು, ಮುಂದಿನ ಹೋರಾಟದ ಬಗ್ಗೆ ರೈತರು ರೂಪುರೇಷೆಗಳನ್ನು ಮಾಡಿಕೊಂಡಿದ್ದಾರೆ. ರೈತರ ಹೋರಾಟಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲವನ್ನ ಕೊಟ್ಟಿವೆ, ಈ ಎಲ್ಲ ಹೋರಾಟ ಇಂದು ಹೊರಬೀಳುವ ಸುಪ್ರೀಂಕೋರ್ಟ್ನ ತೀರ್ಪಿನ ಮೇಲೆ ನಿಂತಿದೆ.