ಸುಪ್ರೀಂ ಕೋರ್ಟ್ನಲ್ಲೂ ಕರ್ನಾಟಕಕ್ಕೆ ಸಿಗದ ನ್ಯಾಯ ; ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ
1343 views
news ವಿಡಿಯೋಗಳಿಗೆ ಚಂದಾದಾರರಾಗಿಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ನಲ್ಲಾದ್ರೂ ರಾಜ್ಯಕ್ಕೆ ನ್ಯಾಯ ಸಿಗಬಹುದು ಎಂಬ ಆಶಾ ಭಾವನೆಯಿಂದ ರೈತರು ಕಾದುಕುಳಿತ್ತಿದ್ದರು, ಆದ್ರೆ ಸುಪ್ರೀಂ ಕೋರ್ಟ್ ಕಾವೇರಿ ಪ್ರಾಧಿಕಾರದ ಸಮಿತಿಯ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ಕರ್ನಾಟಕಕ್ಕೆ ಶಾಕ್ ಕೊಟ್ಟಿದೆ, ಮುಂದಿನ 15 ದಿನ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಿದೆ. ಬರದಿಂದ ಕಂಗೆಟ್ಟಿದ್ಧ ರಾಜ್ಯದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಹೌದು… ಈ ಹಿಂದೆ ಕಾವೇರಿ ಪ್ರಾಧಿಕಾರ ಸಮಿತಿ ಎರಡು ಬಾರಿಯೂ ತಮಿಳುನಾಡು ಪರ ಆದೇಶವನ್ನು ನೀಡಿತ್ತು, ಆದೇಶದಿಂದ ರೊಚ್ಚಿಗೆದ್ದು ರೈತರು ಪ್ರತಿಭಟನೆಯನ್ನು ಕೂಡ ಮಾಡಿದ್ದರು, ಆದ್ರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಕಾವೇರಿ ಪ್ರಾಧಿಕಾರ ಸಮಿತಿ ಮಾತ್ರ ತಮಿಳುನಾಡಿಗೆ ನೀರು ಹರಿಸಲೇ ಬೇಕು ಎಂದು ಕಟ್ಟಾಜ್ಞೆ ಹೊರಡಿಸಿತು, ಇದರಿಂದ ಬೇಸತ್ತ ರಾಜ್ಯ ಸರ್ಕಾರ ಪ್ರಾಧಿಕಾರ ಸಮಿತಿ ಆದೇಶ ತಡೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು, ಆದ್ರೆ ಸುಪ್ರೀಂ ಕೋರ್ಟ್ನಲ್ಲಿ ಆಗಿದ್ದೇ ಬೇರೆ, CWMA ಆದೇಶವನ್ನೇ ಎತ್ತಿ ಹಿಡಿದಿದೆ, ತಮಿಳುನಾಡಿಗೆ ನೀರು ಬಿಡಬೇಕೆಂದು ತೀರ್ಪು ಕೊಟ್ಟಿದೆ.
ಸುಪ್ರೀಂ ಕೋರ್ಟ್ ತೀರ್ಪಿನಿಂದ ಕಾವೇರಿ ಕೊಳ್ಳದಲ್ಲಿ ಸಮಸ್ಯೆ ಮತ್ತಷ್ಟು ಉಲ್ಭಣಗೊಳ್ಳುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ. CWMA ಆದೇಶವನ್ನು ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದ್ದು, ಪ್ರತಿ 15 ದಿನಗಳಿಗೊಮ್ಮೆ ಪ್ರಾಧಿಕಾರ ಸಭೆ ನಡೆಸಬೇಕು ಎಂದು ಸೂಚನೆ ನೀಡಿದೆ.
ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೊಹಟಗಿ ವಾದ ಮಂಡಿಸಿದರೆ, ಕರ್ನಾಟಕದ ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ವಾದ ಮಂಡಿಸಿದರು. ಇಬ್ಬರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.