ಹೃದಯಾಘಾತದಲ್ಲಿ ಸಾವು ತಪ್ಪಿಸಲು ಸರಕಾರದಿಂದ ಉಚಿತ ಇಂಜೆಕ್ಷನ್, ಎಲ್ಲೆಲ್ಲಿ ಸಿಗುತ್ತೆ? ಯಾರಿಗೆಲ್ಲಾ ಕೊಡ್ತಾರೆ?
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿ
ಸರಿಯಾದ ಸಮಯಕ್ಕೆ ಈ ಇಂಜೆಕ್ಷನ್ ಸಿಕ್ಕಿದ್ದರೆ, ಕನ್ನಡ ನಾಡಿನ ಪ್ರೀತಿಯ 'ಅಪ್ಪು' ಈಗಲೂ ಮನಸಾರೆ ನಗುತ್ತಾ ಓಡಾಡುತ್ತಿದ್ದರು. ತೀವ್ರ ಹೃದಯಾಘಾತದಿಂದ ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿರುವ ನೋವು ನಮ್ಮೆಲ್ಲರಲ್ಲೂ ಉಳಿದು ಹೋಗಿದೆ. ಇಂಥ ನೋವನ್ನು ಕಡಿಮ ಮಾಡುವ ನಿಟ್ಟಿನಲ್ಲಿ ಜನ ಸಾಮಾನ್ಯರಿಗೂ ಜೀವ ರಕ್ಷಕ ಇಂಜೆಕ್ಷನ್ ಉಚಿತವಾಗಿ ಸಿಗುವಂತೆ ಮಾಡಲು ಕರ್ನಾಟಕ ಸರಕಾರ ಮುಂದಾಗಿದೆ. ಹೃದಯಗಳ ಬಡಿತ ತಪ್ಪುವುದನ್ನು ತಡೆಯಲು 'ಡಾ.ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ' ಯೋಜನೆಯ ಎರಡನೇ ಹಂತಕ್ಕೆ ಚಾಲನೆ ನೀಡಲಾಗಿದೆ.
ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಹೃದಯ ಜ್ಯೋತಿ ಯೋಜನೆ ಆರಂಭಿಸಿದೆ. ಹೃದಯಾಘಾತದ ಲಕ್ಷಣ ಕಾಣಿಸಿಕೊಂಡ ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ತೀವ್ರ ಆಘಾತ ತಡೆಗೆ ಚುಚ್ಚು ಮದ್ದು ನೀಡುತ್ತಾರೆ. ಯಾವೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯ? ಇಲ್ಲಿದೆ ಮಾಹಿತಿ.
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಶುಕ್ರವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಹಠಾತ್ ಹೃದಯಾಘತಗಳನ್ನು ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು 'ಟೆನೆಕ್ಟೆಪ್ಲೇಸ್' ಅನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.
71 ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರದಂತೆ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಕೇಂದ್ರಗಳನ್ನಾಗಿ ರಚಿಸಲಾಗಿದೆ. ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ 6 ನಿಮಿಷದೊಳಗೆ ಅವರ ಕಂಡೀಷನ್ ಕ್ರಿಟಕಲ್ ಹಂತದಲ್ಲಿದೆಯೋ ಇಲ್ಲವೋ ಎಂಬುದನ್ನ AI ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುತ್ತದೆ. ಟ್ರೈಕಾಗ್ (Tricog) ಸಂಸ್ಥೆಯವರ AI ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮೂನ್ಸೂಚನೆಯನ್ನು ನೀಡುತ್ತಾರೆ. ಕ್ರಿಟಿಕಲ್ ಎಂದು ಖಚಿತವಾದ ತಕ್ಷಣವೇ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ತಾಲೂಕು ಆಸ್ಪತ್ರೆಯಲ್ಲೇ ನೀಡಲಾಗುತ್ತದೆ. ಗೋಲ್ಡನ್ ಅವರ್ ಒಳಗಡೆ ಜೀವ ಉಳಿಸುವ ಚಿಕಿತ್ಸೆ ದೊರೆಯುವಂತೆ ಯೋಜನೆ ರೂಪಿಸಲಾಗಿದೆ.
ಎಲ್ಲೆಲ್ಲಿ ಹಬ್ಗಳು?
ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಹಾಗೂ ಬಳ್ಳಾರಿ ಸೇರಿದಂತೆ ಎಂಟು ಕಡೆ ಹಬ್ಗಳು. 5 ಜಿಲ್ಲಾ ಮತ್ತು 36 ತಾಲ್ಲೂಕು ಆಸ್ಪತ್ರೆಗಳು ಸೇರಿದಂತೆ 41 ಕಡೆ ಸ್ಪೋಕ್ಗಳನ್ನು ಮಾಡಲಾಗಿದೆ.
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಮೊದಲನೇ ಹಂತದಲ್ಲಿ ಸ್ಟೆಮಿ (STEMI) ಹೆಸರಲ್ಲಿ ಹಬ್- ಸ್ಪೋಕ್ ಮಾದರಿಯನ್ನು ಜಯದೇವಾ ಹೃದ್ರೋಗ ಸಂಸ್ಥೆಯೊಂದಿಗೆ 45 ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗಿತ್ತು. ಆದರೆ ಮೊದಲ ಹಂತದ ಯೋಜನೆಯಲ್ಲಿ ಜೀವರಕ್ಷಕವಾಗಿರುವ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಲಭ್ಯವಿರಲಿಲ್ಲ. ಈಗ ಆ ಚುಚ್ಚುಮದ್ದು ಲಭ್ಯವಾಗಲಿದೆ. ಮೊದಲ ಹಂತದಲ್ಲಿ ಇಲ್ಲಿಯವರೆಗೂ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಹೆಚ್ಚು ಹೃದಯಸಂಬಂಧಿ ರೋಗಲಕ್ಷಣ ಹೊಂದಿರುವವರನ್ನು ಈ ಕೇಂದ್ರಗಳಲ್ಲಿ ತಪಾಸಣೆ ಮಾಡಲಾಗಿದೆ.