Odisha Train Tragedy : ರೈಲ್ವೇ ದುರಂತದ ಆಘಾತಕಾರಿ ಕ್ಷಣಗಳು ಹೇಗಿತ್ತು? ಪ್ರಯಾಣಿಕರ ಅನುಭವ
3212 views
ಸುದ್ದಿ ವಿಡಿಯೋಗಳಿಗೆ ಚಂದಾದಾರರಾಗಿಬಾಲಸೋರಾ: ಇತ್ತೀಚಿನ ದಶಕಗಳಲ್ಲಿ ಭಾರತ ಕಂಡು ಕೇಳರಿಯದ ದುರಂತವೊಂದು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದೆ. ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ಸರಣಿ ರೈಲು ಅಪಘಾತ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ದುರಂತದಲ್ಲಿ ಇದುವರೆಗೂ 237ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಬೆಂಗಳೂರು-ಹೌರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ದುರಂತದಲ್ಲಿ ಬದುಕುಳಿದವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.