ಯಶೋಭೂಮಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ, 13,000 ಕೋಟಿ ರೂ. ಯೋಜನೆ
ಹೊಸದಿಲ್ಲಿ: ವಿಶ್ವಕರ್ಮ ಮಹೋತ್ಸವದ ದಿನ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ವಿಶೇಷವಾಗಿ ಹಿಂದುಳಿದ ಸಮುದಾಯಗಳಿಗೆ ಪ್ರಯೋಜನವಾಗುವ 'ಪಿ.ಎಂ ವಿಶ್ವಕರ್ಮ' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಪಿಎಂ ವಿಶ್ವಕರ್ಮ ಯೋಜನೆಯಿಂದಾಗಿ ಸಾಂಪ್ರದಾಯಿಕ ಕೌಶಲ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕುಶಲಕರ್ಮಿಗಳಿಗೆ ಸಹಾಯವಾಗಲಿದೆ. ಇದಕ್ಕಾಗಿ 13,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಯೋಜನೆಯಿಂದಾಗಿ ಕುಶಲಕರ್ಮಿಗಳಿಗೆ ಆಧಾರವಿಲ್ಲದೆ ಒಂದು ಲಕ್ಷ ರೂಪಾಯಿವರೆಗೂ ಸಾಲ ಸಿಗಲಿದೆ.
ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣಪತ್ರ ಸಿಗುತ್ತದೆ. ಕೌಶಲ ಉನ್ನತೀಕರಣ, ಹದಿನೈದು ಸಾವಿರ ರೂಪಾಯಿಯಷ್ಟು ಟೂಲ್ಕಿಟ್ ಪ್ರೋತ್ಸಾಹ, ಶೇಕಡ 5ರಷ್ಟು ಬಡ್ಡಿ ದರದಲ್ಲಿ ಎರಡು ಲಕ್ಷ ರೂಪಾಯಿ ಸಾಲ ಸಿಗಲಿದೆ. ಕುಶಲಕರ್ಮಿಗಳಿಗೆ ಡಿಜಿಟಲ್ ವ್ಯವಹಾರಕ್ಕೆ ಬೆಂಬಲ ಸಿಗಲಿದೆ. ಅಕ್ಕಸಾಲಿಗರು, ಕ್ಷೌರಿಕರು, ಕಮ್ಮಾರರು, ಮಡಿವಾಳರು, ನೇಕಾರರು ಸೇರಿದಂತೆ ಸುಮಾರು ಮೂವತ್ತು ಲಕ್ಷ ಕುಟುಂಬಗಳಿಗೆ ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನ ಸಿಗಲಿದೆ. ಸೇವಾ ಕೇಂದ್ರಗಳಲ್ಲಿ ಈ ಯೋಜನೆಗೆ ಅರ್ಹರು ನೋಂದಾಯಿಸಿಕೊಳ್ಳಬಹುದಾಗಿದೆ.

Curated byCurated byಹೇಮಂತ್ ಕುಮಾರ್ ಎಸ್|TimesXP Kannada|17 Sept 2023