ಲೋಕಸಭೆಯಲ್ಲಿ 'ನಾರಿ ಶಕ್ತಿ ವಂದನಾ ಅಧಿನಿಯಮ' ಮಂಡಿಸಿದ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್
2238 views
news ವಿಡಿಯೋಗಳಿಗೆ ಚಂದಾದಾರರಾಗಿಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ನಲ್ಲಿ ಮಂಡಿಸಿದ್ದಾರೆ. ಈ ಮಸೂದೆಗೆ ಸೋಮವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕಾರ ದೊರಕಿತ್ತು. ಈ ವಿಧೇಯಕವನ್ನು ಸಚಿವ ಮೇಘವಾಲ್ ಅವರು ಮಂಗಳವಾರ ಕೆಳಮನೆಯಲ್ಲಿ ಮಂಡಿಸಲಿದ್ದಾರೆ ಎಂದು ಲೋಕಸಭೆ ನೋಟಿಸ್ನಲ್ಲಿ ತಿಳಿಸಿತ್ತು. ಅದರಂತೆ ಮಧ್ಯಾಹ್ನ ಹೊಸ ಸಂಸತ್ನಲ್ಲಿ ಶುರುವಾದ ಅಧಿವೇಶನದಲ್ಲಿ ಮೊದಲ ಚರ್ಚೆಯನ್ನಾಗಿ ವಿಧೇಯಕದ ಮಂಡನೆ ನಡೆದಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ಈ ವಿಧೇಯಕ ನೀಡುತ್ತದೆ. ಆದರೆ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗಳಿಗೆ ಇದು ಅನ್ವಯವಾಗುವುದಿಲ್ಲ. 'ನಾರಿ ಶಕ್ತಿ ವಂದನಾ ಅಧಿನಿಯಮವು' ಅನುಮೋದನೆಯಾದರೆ ಲೋಕಸಭೆಯಲ್ಲಿ ಮಹಿಳೆಯರ ಸಂಖ್ಯೆಯು 181ಕ್ಕೆ ಏರಿಕೆಯಾಗಲಿದೆ ಎಂದು ಅರ್ಜುನ್ ರಾಮ್ ಮೇಘವಾಲ್ ಹೇಳಿದರು.
ಮಹಿಳಾ ಮೀಸಲಾತಿ ನೂತನ ಬಿಲ್ಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಬುಧವಾರ ಹಾಗೂ ರಾಜ್ಯಸಭೆಯಲ್ಲಿ ಗುರುವಾರ ಚರ್ಚೆ ನಡೆಯಲಿದೆ. ಇದು 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾಗಿದೆ.