ಗುರುವಾರ ಮುಂಬೈನಲ್ಲಿ ನಡೆದಿದ್ದ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಭಾರತ ತಂಡ 302 ರನ್ಗಳ ಭಾರಿ ಅಂತರದಲ್ಲಿ ಗೆಲುವು ಪಡೆಯಿತು. ಆ ಮೂಲಕ ಟೂರ್ನಿಯ ಸೆಮಿಫೈನಲ್ಸ್ಗೆ ಅಧಿಕೃತವಾಗಿ ಅರ್ಹತೆ ಪಡೆಯಿತು. ಭಾರತ ತಂಡದ ಪರ ಬ್ಯಾಟಿಂಗ್ನಲ್ಲಿ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಮಿಂಚಿದರೆ, ಬೌಲಿಂಗ್ನಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಮಿಂಚಿದರು. ಭಾರತ ತಂಡದ ಈ ದಾಖಲೆಯ ಜಯದ ಬಗ್ಗೆ ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.
sports|Authored byರಮೇಶ ಕೋಟೆ|TimesXP KannadaUpdated: 3 Nov 2023, 10:54 pm